ನಟ ಅರ್ಜುನ್ ಸರ್ಜಾಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ

ನಟ ಅರ್ಜುನ್ ಸರ್ಜಾಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ

YK   ¦    Nov 04, 2018 11:22:24 AM (IST)
ನಟ ಅರ್ಜುನ್ ಸರ್ಜಾಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ

ಬೆಂಗಳೂರು: ನಟಿ ಶ್ರುತಿ ಹರಿಹರನ್ ಅವರ ಎಸಗಿದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾಗೆ ನೋಟಿಸ್ ಜಾರಿ ಮಾಡಲಾಗಿದ್ದು, ಸೋಮವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.

ನಾಳೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅರ್ಜುನ್ ಸರ್ಜಾ ವಿಚಾರಣೆ ನಡೆಯಲಿದೆ. ನಟಿ ಶ್ರುತಿ ಹರಿಹರನ್ ಅವರಿಗೆ ವಿಸ್ಮಯ ಚಿತ್ರದ ಶೂಟಿಂಗ್ ವೇಳೆ ನಟ ಅರ್ಜುನ್ ಸರ್ಜಾ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು.

ಅದಲ್ಲದೆ ದೂರು ದಾಖಲಿಸಿದ್ದರು. ಶ್ರುತಿ ದೂರಿನಂತೆ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.