ಅನಾರೋಗ್ಯದಿಂದ ದರ್ಶನ್ ಆಸ್ಪತ್ರೆಗೆ ದಾಖಲು

ಅನಾರೋಗ್ಯದಿಂದ ದರ್ಶನ್ ಆಸ್ಪತ್ರೆಗೆ ದಾಖಲು

HSA   ¦    Mar 04, 2020 07:27:21 PM (IST)
ಅನಾರೋಗ್ಯದಿಂದ ದರ್ಶನ್ ಆಸ್ಪತ್ರೆಗೆ ದಾಖಲು

ಮೈಸೂರು: ಅನಾರೋಗ್ಯಕ್ಕೆ ಒಳಗಾಗಿರುವ ನಟ ದರ್ಶನ್ ಮೈಸೂರಿನ ಕೊಲಂಬಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೊಟ್ಟೆ ನೋವಿನ ಹಿನ್ನೆಲೆಯಲ್ಲಿ ದರ್ಶನ್ ಆಸ್ಪತ್ರೆಗೆ ದಾಖಲಾಗಿರುವರು ಎಂದು ಹೇಳಲಾಗಿದೆ. ಈ ಬಗ್ಗೆ ವೈದ್ಯರು ಇನ್ನಷ್ಟೇ ಅಧಿಕೃತ ಮಾಹಿತಿ ನೀಡಬೇಕಾಗಿದೆ.

ಆಸ್ಪತ್ರೆ ಆವರಣದಲ್ಲಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದಾರೆ.

ರಾಬರ್ಟ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದ ವೇಳೆ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದೆ ಎಂದು ವರದಿಗಳು ಹೇಳಿವೆ.