ಬಿಟ್ರನ್ ಸರ್ಕಾರದಿಂದ ಪ್ರಶಸ್ತಿ ಸ್ವೀಕರಿಸಿದ ಕನ್ನಡ ನಟ ದರ್ಶನ್

ಬಿಟ್ರನ್ ಸರ್ಕಾರದಿಂದ ಪ್ರಶಸ್ತಿ ಸ್ವೀಕರಿಸಿದ ಕನ್ನಡ ನಟ ದರ್ಶನ್

Oct 20, 2017 11:28:44 AM (IST)
ಬಿಟ್ರನ್ ಸರ್ಕಾರದಿಂದ ಪ್ರಶಸ್ತಿ ಸ್ವೀಕರಿಸಿದ ಕನ್ನಡ ನಟ ದರ್ಶನ್

ಬೆಂಗಳೂರು: ಬ್ರಿಟನ್ ನ ಸಂಸತ್ತಿನಲ್ಲಿ ಅಲ್ಲಿನ ಸರ್ಕಾರ ನೀಡುವ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿಯನ್ನು ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗುರುವಾರ ಸ್ವೀಕರಿಸಿದರು. ಈ ಪ್ರಶಸ್ತಿ ಪಡೆದ ದಕ್ಷಿಣ ಭಾರತದ ಹಾಗೂ ಕನ್ನಡದ ಮೊದಲ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಸಿನಿಮಾ ಕ್ಷೇತ್ರಕ್ಕೆ ದರ್ಶನ್ ನೀಡಿರುವ ಕೊಡುಗೆ ಪರಿಗಣಿಸಿ ಬ್ರಿಟನ್ ಸರ್ಕಾರವು ಮೆಚ್ಚುಗೆ ವ್ಯಕ್ತಪಡಿಸಿ ಅವರನ್ನು ಪ್ರಶಸ್ತಿಗೆ ಪರಿಗಣಿಸಿತ್ತು. ಪ್ರಶಸ್ತಿ ಸ್ವೀಕರಿಸಲು ಲಂಡನ್ ಗೆ ಆಗಮಿಸುವಂತೆ ಬ್ರಿಟನ್ ಸರ್ಕಾರವು ಆಹ್ವಾನ ನೀಡಿತ್ತು.

ಪ್ರಶಸ್ತಿ ಸ್ವೀಕರಿಸುತ್ತಿರುವ ಫೋಟೋವನ್ನು ದರ್ಶನ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆ ಬಾಲಿವುಡ್ ನ ಸಲ್ಮಾನ್ ಖಾನ್, ಅಮಿತಾಭ್ ಬಚ್ಚನ್ ಸೇರಿದಂತೆ ಹಲವರು ಈ ಪ್ರಶಸ್ತಿ ಪಡೆದಿದ್ದಾರೆ. ದಕ್ಷಿಣ ಭಾರತದಲ್ಲಿ ಕನ್ನಡಿಗನೊಬ್ಬ ಮೊದಲ ಸಲ ಈ ಪ್ರಶಸ್ತಿ ಪಡೆದಿರುವುದು ಕನ್ನಡಿಗರು ಹೆಮ್ಮೆ ಪಡುವಂತಾಗಿದೆ.