ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು

ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು

HSA   ¦    Oct 08, 2018 03:19:15 PM (IST)
ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು

ಮುಂಬಯಿ: ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಮತ್ತೆ ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದು, ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ ಎಂದು ವರದಿಗಳು ಹೇಳಿವೆ.

ದಿಲೀಪ್ ಕುಮಾರ್ ಅವರನ್ನು ಕಳೆದ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಕಳೆದ ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ ಎಂದು ನಟನ ಟ್ವಿಟ್ಟರ್ ಖಾತೆ ನಿರ್ವಹಿಸುತ್ತಿರುವ ಫೈಸಲ್ ಫಾರೂಖಿ ಎಂಬವರು ತಿಳಿಸಿದ್ದಾರೆ.

ದಿಲೀಪ್ ಕುಮಾರ್ ಅವರನ್ನು ಕೆಲವು ದಿನಗಳ ಹಿಂದೆಯು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ಬಳಿಕ ಬಿಡುಗಡೆಗೊಳಿಸಲಾಗಿತ್ತು.

ದಿಲೀಪ್ ಕುಮಾರ್ ಅವರು ಸಂಪೂರ್ಣವಾಗಿ ಚೇತರಿಸಿದ್ದಾರೆ. ಅವರು ಈಗ ಆರೋಗ್ಯವಾಗಿದ್ದಾರೆ. ಅವರಿಗೆ ಮನೆಯಲ್ಲೇ ಆರೈಕೆ ನಡೆಯುತ್ತಿದೆ ಎಂದು ದಿಲೀಪ್ ಕುಮಾರ್ ಅವರು ಪತ್ನಿ ಸೈರಾ ಬಾನು ಮಾಧ್ಯಮಗಳಿಗೆ ತಿಳಿಸಿದ್ದರು.