ಮುಂಬೈ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ಮುಂಬೈ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

YK   ¦    Mar 26, 2018 02:54:48 PM (IST)
ಮುಂಬೈ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ಮುಂಬೈ: ಈಚೆಗೆ ತಿಲಕ್ ನಗರ ಪೆಸ್ತೂಮ್ ಸಾಗರ್ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ಚೆಂಬೂರು ತಿಲಕ್ ನಗರದ ಅಮಿ ಮೈದಾನದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಪೆಸ್ತೂಮ್ ಸಾಗರ್ ಕರ್ನಾಟಕ ಸಂಘದ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ನಾಗವೇಣಿ ಎಸ್. ಶೆಟ್ಟಿ ಉದ್ಘಾಟಿಸಿದರು.

ಗೌರವ ಅತಿಥಿಯಾಗಿ ವೀಣಾ ಉಳ್ಳಾಲ್, ಬಂಟ್ಸ್ ಸಂಘ ಮುಂಬೈ ಮಹಿಳಾ ವಿಭಾಗದ ಉಪಾಧ್ಯಕ್ಷೆ ಉಮಾ ಕೆ.ಶೆಟ್ಟಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಮಣ್ಣ ಬಿ.ದೇವಾಡಿಗ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.

ಈ ವೇಳೆ ಸ್ಥಳೀಯ ನಗರ ಸೇವಕ ಸುಶಾಯ್ ಸಾವಂತ್, ಸುರಕ್ಷಾ ಕ್ರೀಡಾ ಮಂಡಳಿಯ ಅಧ್ಯಕ್ಷ ನಿತಿನ್ ಕದಂ, ಚಿತ್ರನಟಿ ಶ್ರದ್ಧಾ ಸಾಲ್ಯಾನ್, ಪೆಸ್ತೂಮ್ ಸಾಗರ್ ಕರ್ನಾಟಕ ಸಂಘದ ಕಾರ್ಯದರ್ಶಿ ಮಾಲತಿ ಮೊಲಿ ಶುಭ ಹಾರೈಸಿದರು. ವೇದಿಕೆಯಲ್ಲಿ ರೂಪಶ್ರೀ ವಾರ್ಕಡೆ ಮೊದಲಾದವರು ಇದ್ದರು.