ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದ ತಂದೆ-ಮಗಳು ಸಾವು

ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದ ತಂದೆ-ಮಗಳು ಸಾವು

MV   ¦    Jun 12, 2019 08:34:32 AM (IST)
ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದ ತಂದೆ-ಮಗಳು ಸಾವು

ಬಂಟ್ವಾಳ: ತೋಟದಲ್ಲಿ ಮುರಿದು ಬಿದ್ದಿದ್ದ ತಂತಿಯನ್ನು ಆಕಸ್ಮಿಕವಾಗಿ ತುಳಿದು ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಬಾರಕಿನಡಿ ಎಂಬಲ್ಲಿ ಮಂಗಳವಾರ ಸಂಭವಿಸಿದೆ.

ಮೃತರನ್ನು ಬಾರಕಿನಡಿ ನಿವಾಸಿಗಳಾದ ಗೋಪಾಲಕೃಷ್ಣ ಶೆಟ್ಟಿ(63), ಇವರ ಮಗಳು ದಿವ್ಯಾಶ್ರಿ(20) ಮೃತಪಟ್ಟವರು ಎಂದು ತಿಳಿದುಬಂದಿದೆ.

ಘಟನೆ ವಿವರ
ಮಂಗಳವಾರ ಸಂಜೆ ತಂದೆ ಮಗಳೊಂದಿಗೆ ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದರು. ಈ ವೇಳೆ ತೋಟದಲ್ಲಿ ಮುರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕ ತುಳಿದು ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಹಳೆಯದಾದ ತಂತಿಗಳನ್ನು ಮೆಸ್ಕಾಂ ಇಲಾಖೆ ಬದಲಿಸದೆ ಇರುವುದು ಈ ಘಟನೆಗ ಮೂಲ ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಘಟನಾ ಸ್ಥಳಕ್ಕೆ ಬಂಟ್ವಾಳ ವೃತ್ತ ನಿರೀಕ್ಷಕ ಶರಣಗೌಡ, ಎಸ್ಸೈ ಸುಧಾಕರ ತೋನ್ಸೆ, ಸಿಬ್ಬಂದಿಗಳಾದ ಸುರೇಶ್, ವರ್ಗೀಸ್, ಜಯರಾಮ, ಜನಾರ್ದನ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗೋಪಾಲಕೃಷ್ಣ ಅವರು ಚೆನ್ನೈತ್ಯೋಡಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು, ದಿವ್ಯಾಶ್ರೀ ಅವರು ಹುಟ್ಟು ವಿಕಲಾಂಗ ಯುವತಿ ಎಂದು ತಿಳಿದುಬಂದಿದೆ.