ಆ್ಯಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಆ್ಯಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ

DA   ¦    Nov 14, 2017 07:29:21 AM (IST)
ಆ್ಯಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ವ್ಯಕ್ತಿಯೋರ್ವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೈದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಯ್ಯೂರಿನಲ್ಲಿ ಸೋಮವಾರ ನಡೆದಿದೆ.

ಇಲ್ಲಿಯ ದೆಂಕಿನಡ್ಕ ನಿವಾಸಿ ಧರ್ಣಪ್ಪಗೌಡ(50) ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಯಿಂದ ಔಷಧೋಪಚಾರ ನಡೆದರೂ ಗುಣಮುಖವಾಗಿರಲಿಲ್ಲ. ಇದರಿಂದ ನೊಂದುಕೊಂಡು ಮನೆಯಲ್ಲಿ ರಬ್ಬರ್ ಹಾಲಿಗೆ ಮಿಶ್ರಣ ಮಾಡಲು ತಂದಿಟ್ಟಿದ್ದ ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಣ್ಣ ದೊಂಬಯ್ಯಗೌಡ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.