ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ 'ಶ್ರಮಿಕ' ನೂತನ ಕಚೇರಿ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ 'ಶ್ರಮಿಕ' ನೂತನ ಕಚೇರಿ ಉದ್ಘಾಟನೆ

DA   ¦    Sep 14, 2018 05:15:20 PM (IST)
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ 'ಶ್ರಮಿಕ' ನೂತನ ಕಚೇರಿ ಉದ್ಘಾಟನೆ

ಬೆಳ್ತಂಗಡಿ: ತಾಲ್ಲೂಕಿನ ಶಾಸಕ ಹರೀಶ ಪೂಂಜ ಅವರ ನೂತನ ಕಚೇರಿ ‘ಶ್ರಮಿಕ’ ಇಲ್ಲಿನ ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗದ ಕಚೇರಿಯ ಸಮೀಪದ ಕಟ್ಟಡದಲ್ಲಿ ಶುಕ್ರವಾರ ಉದ್ಘಾಟನೆಗೊಂಡಿತು. ವಿಟ್ಲದ ಮೂರುಕಜೆ ಮೈತ್ರೇಯಿ ಗುರುಕುಲದ ಅಜೇಯ ವಿಶ್ವಸ್ಥ ಮಂಡಳಿ ಅಧ್ಯಕ್ಷ ಎಸ್. ಆರ್. ರಂಗಮೂರ್ತಿ ಕಚೇರಿಯನ್ನು ಉದ್ಘಾಟಿಸಿ, ಶುಭ ಹಾರೈಸಿದರು.

ಸಂಸದ ನಳಿನ್ ಕುಮಾರ್ ಕಟೀಲ್, ಬರೋಡಾದ ಉದ್ಯಮಿ ಶಶಿಧರ್ ಶೆಟ್ಟಿ, ವಿಶ್ವ ಹಿಂದು ಪರಿಷತ್ ರಾಜ್ಯಾಧ್ಯಕ್ಷ ಎಂ.ಬಿ. ಪುರಾಣಿಕ್, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ವಿಭಾಗ ಸಹ ಪ್ರಭಾರಿ ಪ್ರತಾಪಸಿಂಹ ನಾಯಕ್, ಬಿಜೆಪಿ ಮುಖಂಡರುಗಳಾದ ಕುಶಾಲಪ್ಪ ಗೌಡ ಪೂವಾಜೆ, ಹರಿಕೃಷ್ಣ ಬಂಟ್ವಾಳ, ಶಾರದ ರೈ, ಬೆಳ್ತಂಗಡಿ ಮಂಡಲ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೆಳಾಲು, ಶಾಸಕ ಹರೀಶ ಪೂಂಜರ ಹೆತ್ತವರಾದ ಮುತ್ತಣ್ಣ ಪೂಂಜ ಮತ್ತು ನಳಿನಿ ಪೂಂಜ, ಪತ್ನಿ ಸ್ವೀಕೃತ, ಪುತ್ರ ಗಹನ್, ಮತ್ತಿತರರು ಇದ್ದರು.

ಭೇಟಿ ನೀಡಿದ ಗಣ್ಯರು: ಕನ್ಯಾಡಿ ಶ್ರೀ ರಾಮಕ್ಷೇತ್ರದ ಮಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀ ಅವರು ನೂತನ ಕಚೇರಿಗೆ ಭೇಟಿ ನೀಡಿ ಆಶೀರ್ವದಿಸಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ, ಜನಜಾಗೃತಿ ಸ್ಥಾಪಕಾಧ್ಯಕ್ಷ ವಸಂತ ಸಾಲಿಯಾನ್, ವಾಣಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸೋಮೇಗೌಡ, ಉಜಿರೆಯ ಶರತ್‍ಕೃಷ್ಣ ಪಡ್ವೆಟ್ನಾಯ, ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ,, ಬಿಜೆಪಿ ಮುಖಂಡರಾದ ಕ್ಯಾ| ಬ್ರಿಜೇಶ್ ಚೌಟ, ಈಶ್ವರ ಕಟೀಲ್, ಅಭಿಲಾಷ್ ಮೂಡುಬಿದ್ರೆ , ಸುನೀಲ್ ದಡ್ಡು, ಸಂದೀಪ್ ಶೆಟ್ಟಿ ಮಂಗಳೂರು, ಉದ್ಯಮಿಗಳಾದ ಪುಷ್ಪರಾಜ್ ಜೈನ್, ಗಣೇಶ ಗೌಡ ಪುದುವೆಟ್ಟು ಮೊದಲಾದವರು ಆಗಮಿಸಿ ಶುಭ ಹಾರೈಸಿದರು.