ಬಾಬ್ರಿ ಮಸೀದಿ ಧ್ವಂಸ ದಿನ: ಮಂಗಳೂರಿನಲ್ಲಿ ನಿಷೇದಾಜ್ಞೆ ಜಾರಿ

ಬಾಬ್ರಿ ಮಸೀದಿ ಧ್ವಂಸ ದಿನ: ಮಂಗಳೂರಿನಲ್ಲಿ ನಿಷೇದಾಜ್ಞೆ ಜಾರಿ

HSA   ¦    Dec 06, 2017 12:45:32 PM (IST)
ಬಾಬ್ರಿ ಮಸೀದಿ ಧ್ವಂಸ ದಿನ: ಮಂಗಳೂರಿನಲ್ಲಿ ನಿಷೇದಾಜ್ಞೆ ಜಾರಿ

ಮಂಗಳೂರು: ಬಾಬ್ರಿ ಮಸೀದಿ ಧ್ವಂಸವಾಗಿ ಇಂದಿಗೆ 25 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ವಿಜಯೋತ್ಸವ ಮತ್ತು ಮುಸ್ಲಿಂ ಸಂಘಟನೆಗಳು ಕರಾಳ ದಿನಾಚರನೆ ಆಚರಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಬೆಳಗ್ಗೆ ಆರು ಗಂಟೆಯಿಂದ ಮಧ್ಯರಾತ್ರಿ 12 ಗಂಟೆ ತನಕ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

ಡಿ.6ರಂದು ಬೆಳಗ್ಗೆ ಆರರಿಂದ ಮಧ್ಯರಾತ್ರಿ ತನಕ ನಿಷೇದಾಜ್ಞೆ ಜಾರಿಯಲ್ಲಿರಲಿದೆ ಎಂದು ಮಂಗಳೂರು ಕಮಿಷನರ್ ಮತ್ತು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
ಪಿಎಫ್ ಐ ಮತ್ತು ಎಸ್ ಡಿಪಿಐ ಸುರತ್ಕಲ್, ತೊಕ್ಕೊಟ್ಟು, ಉಳ್ಳಾಲ ಮತ್ತು ಬಜ್ಪೆಯಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಲು ಮುಂದಾಗಿವೆ ಎಂದು ತಿಳಿದುಬಂದಿದೆ. ಅದೇ ರೀತಿ ಕೆಲವು ಹಿಂದೂ ಸಂಘಟನೆಗಳು ವಿಜಯೋತ್ಸವ ಆಚರಣೆಗೆ ಮುಂದಾಗಿದ್ದವು ಎಂದು ತಿಳಿದುಬಂದಿದೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

ನಿಷೇದಾಜ್ಞೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಪ್ರತಿಭಟನಾ ಸಭೆ, ರಸ್ತೆತಡೆ, ವಿಜಯೋತ್ಸವ ರ‍್ಯಾಲಿ ಮೊದಲಾದವುಗಳನ್ನು ನಡೆಸುವಂತಿಲ್ಲ ಎಂದು ತಿಳಿದುಬಂದಿದೆ.