ವಿಧಾನಸಭಾ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ವಿಧಾನಸಭಾ ಕಲಾಪ ಸೋಮವಾರಕ್ಕೆ ಮುಂದೂಡಿಕೆ

YK   ¦    Jul 12, 2019 04:49:17 PM (IST)
ವಿಧಾನಸಭಾ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ಬೆಂಗಳೂರು: ಶುಕ್ರವಾರದಂದು ಆರಂಭವಾದ ವಿಧಾನಸಭಾ ಕಲಾಪವನ್ನು ವಿಧಾನಸಭೆಯ ಸಭಾಧ್ಯಕ್ಷರು ಸೋಮವಾರಕ್ಕೆ ಮುಂದೂಡಿದ್ದಾರೆ.

ಕಲಾಪ ರಂಭವಾಗುತ್ತಿದ್ದಂತ್ತೆ ಅಗಲಿದ ನಾಯಕರಿಗೆ ಸಂತಾಪವನ್ನು ಸೂಚಿಸಲಾಯಿತು. ಈ ವೇಳೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸಮತ ಮಂಡಿಸಲು ನಿರ್ಧರಿಸುವುದಾಗಿ ತಿಳಿಸಿದರು.

ಈ ವೇಳೆ ಮಾತನಾಡಿದ ಅವರು ‘ಇಂದು ಅನಿವಾರ್ಯವಾಗಿ ಈ ಮಾತು ಹೇಳ್ತಿದ್ದೀನಿ. ಸದನದ ಬೆಂಬಲ ಇದ್ದರೆ ಮಾತ್ರ ನಾನು ಈ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ. ನಾನು ಸ್ವಪ್ರೇರಣೆಯಿಂದ ವಿಶ್ವಾಸಮತ ಮಂಡಿಸಲು ನಿರ್ಧರಿಸಿದ್ದಾರೆ. ನನಗೆ ಸಮಯ ಕೊಡಿ. ಅಂತ ಕೋರುತ್ತೇನೆ ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಹೇಳಿದರು.