ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಸೆರೆ

ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಸೆರೆ

HSA   ¦    Apr 16, 2018 05:18:46 PM (IST)
ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಸೆರೆ

ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸರು ಎರಡು ದಿನ ನಡೆಸಿದ ಕಾರ್ಯಾಚರಣೆಯಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ತೊಕ್ಕೊಟ್ಟು ನಿವಾಸಿ ಉಮೇಶ್(48) ಮತ್ತು ಬಂಟ್ವಾಳ ತಾಲೂಕಿನ ಮಾರಿಪಳ್ಳ ನಿವಾಸಿ ಜಬ್ಬಾರ್(36) ಬಂಧಿತ ಆರೋಪಿಗಳು. ಉಮೇಶ್ ನನ್ನು ಭಾನುವಾರ ತೊಕ್ಕೊಟ್ಟುವಿನಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದರು. ಈತನ ಮೇಲೆ ಬಜ್ಪೆ ಠಾಣೆಯಲ್ಲಿ 2 ಮತ್ತು ಕದ್ರಿ ಠಾಣೆಯಲ್ಲಿ ಒಂದು ಪ್ರಕರಣವಿದೆ.

ಜಬ್ಬಾರ್ ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಈತನನ್ನು ಸೋಮವಾರ ಫರಂಗಿಪೇಟೆಯಲ್ಲಿ ಬಂಧಿಸಿದರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.