ಕಾರ್ಕಳ ಉದಯಕುಮಾರ್ ಶೆಟ್ಟಿ ಬೆಂಬಲಿಗರಿಂದ ಭಾರೀ ಪ್ರತಿಭಟನೆ

ಕಾರ್ಕಳ ಉದಯಕುಮಾರ್ ಶೆಟ್ಟಿ ಬೆಂಬಲಿಗರಿಂದ ಭಾರೀ ಪ್ರತಿಭಟನೆ

HSA   ¦    Apr 16, 2018 02:19:16 PM (IST)
ಕಾರ್ಕಳ ಉದಯಕುಮಾರ್ ಶೆಟ್ಟಿ ಬೆಂಬಲಿಗರಿಂದ ಭಾರೀ ಪ್ರತಿಭಟನೆ

ಕಾರ್ಕಳ: ರಾಜ್ಯ ವಿಧಾನಸಭಾ ಚುನಾವಣೆಗೆ ಕಾರ್ಕಳ ಕ್ಷೇತ್ರದಿಂದ ಕಾಂಗ್ರೆಸ್ ಗೋಪಾಲ ಭಂಡಾರಿ ಅವರಿಗೆ ಟಿಕೆಟ್ ನೀಡಿರುವುದನ್ನು ಖಂಡಿಸಿ, ಟಿಕೆಟ್ ವಂಚಿತ ಮುನಿಯಾಲು ಉದಯಕುಮಾರ್ ಶೆಟ್ಟಿ ಬೆಂಬಲಿಗರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ.

ಉದಯ ಕುಮಾರ್ ಶೆಟ್ಟಿ ಅವರ ಬೆಂಬಲಿಗರು ಇಂದು ಕಾರ್ಕಳ ತಾಲೂಕು ಕಚೇರಿ ಬಳಿಯಿರುವ ಶೆಟ್ಟಿ ಅವರ ಕಚೇರಿ ಎದುರು ಪ್ರತಿಭಟಿಸಿದರು. ಇಲ್ಲಿಂದ ಮೆರವಣಿಗೆ ನಡೆಸಿದ ಮೂರು ಸಾವಿರಕ್ಕೂ ಅಧಿಕ ಬೆಂಬಲಿಗರು ಗೋಪಾಲ ಭಂಡಾರಿ ಕಚೇರಿಗೆ ಮುಂದೆ ಹೋಗಿ ಪ್ರತಿಭಟನೆ ನಡೆಸಿದರು.,

ಶೆಟ್ಟಿ ಅವರಿಗೆ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಅವರು ಟಿಕೆಟ್ ತಪ್ಪಿಸಿದ್ದಾರೆಂದು ಆರೋಪಿಸಿರುವ ಪ್ರತಿಭಟನಾಕಾರರು ಮೊಯ್ಲಿ ವಿರುದ್ಧ ಧಿಕ್ಕಾರ ಕೂಗಿ ಅವರ ಪ್ರತಿಕೃತಿ ದಹಿಸಿದರು.

ಉದಯಕುಮಾರ್ ಶೆಟ್ಟಿ ಅವರಿಗೆ ಜೆಡಿಎಸ್ ಗಾಳ
ಕಾಂಗ್ರೆಸ್ ಪಕ್ಷದ ಭಿನ್ಮತದಿಂದ ಲಾಭ ಪಡೆದುಕೊಳ್ಳಲು ಬಯಸಿರುವ ಜೆಡಿಎಸ್, ಉದಯಕುಮಾರ್ ಶೆಟ್ಟಿ ಅವರನ್ನು ಪಕ್ಷಕ್ಕೆ ಸೇರಿಸಲು ಮಾತುಕತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.