ಸುಳ್ಯದಲ್ಲಿ ಗೌಡ ಸಮುದಾಯ ಭವನ ಲೋಕಾರ್ಪಣೆ

ಸುಳ್ಯದಲ್ಲಿ ಗೌಡ ಸಮುದಾಯ ಭವನ ಲೋಕಾರ್ಪಣೆ

GK   ¦    Mar 12, 2018 08:22:34 PM (IST)
ಸುಳ್ಯದಲ್ಲಿ ಗೌಡ ಸಮುದಾಯ ಭವನ ಲೋಕಾರ್ಪಣೆ

ಸುಳ್ಯ: ನಮ್ಮ ಆಚಾರ ವಿಚಾರಗಳನ್ನು ಪೋಷಿಸಲು ಸಮುದಾಯ ಸಂಘಟನೆಗಳು ಅಗತ್ಯ. ಸಮುದಾಯವು ಸಂಘಟಿತರಾದರೆ ಮಾತ್ರ ಸಂಸ್ಕೃತಿ, ಪರಂಪರೆ ಮತ್ತು ಆಚಾರ ವಿಚಾರಗಳು ಬೆಳೆಯಲು ಸಾಧ್ಯ ಎಂದು ಕೇಂದ್ರ ಸಾಂಖ್ಯಿಕ ಅಂಕಿ ಅಂಶಗಳ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ಸುಳ್ಯ ಕೊಡಿಯಾಲಬೈಲಿನಲ್ಲಿ ನಿರ್ಮಣಗೊಂಡಿರುವ ನೂತನ ಗೌಡ ಸಮುದಾಯ ಭವನ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಗೌಡ ಸಮುದಾಯಕ್ಕೆ ಬಲು ದೊಡ್ಡ ಪರಂಪರೆಯಿದೆ. ಸಮಾಜಕ್ಕೆ ಗೌಡ ಸಮಾಜ ದೊಡ್ಡ ಕೊಡುಗೆ ನೀಡಿದೆ. ಹಿರಿಯರ ಕಲ್ಪನೆಯಂತೆ ಗೌಡ ಸಮಾಜವನ್ನು ಕಟ್ಟಿ ಇತರ ಸಮುದಾಯಕ್ಕೂ ಮಾರ್ಗದರ್ಶಿಯಾಗಬಲ್ಲ ರೀತಿಯಲ್ಲಿ ಕೊಡುಗೆಯನ್ನು ನೀಡಬೇಕು ಎಂದು ಅವರು ಹೇಳಿದರು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಗೌಡ ಸಮುದಾಯಭವನವನ್ನು ಉದ್ಘಾಟಿಸಿದರು. `ಸಮುದಾಯ ಭವನ ಇಡೀ ಸಮಾಜಕ್ಕೆ ದೊಡ್ಡ ಕೊಡುಗೆಯಾಗಿದೆ. ಭಾವನಾತ್ಮಕವಾಗಿ ಎಲ್ಲರೂ ಒಂದಾಗಿ ಸಂಬಂಧವನ್ನೂ, ಬಾಂಧವ್ಯವನ್ನು ಗಟ್ಟಿಗೊಳಿಸಿದರೆ ಸಮುದಾಯ ಶಕ್ತಿಯಾಗಿ ಬೆಳೆಯುತ್ತದೆ ಎಂದು ಅವರು ಹೇಳಿದರು.

ಆದಿಚುಚಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಮೈಸೂರು ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ, ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ಆಶೀರ್ವಚನ ನೀಡಿದರು.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸುಳ್ಯ ಶಾಸಕ ಎಸ್.ಅಂಗಾರ, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ದ.ಕ.ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಂಗಳೂರು ವಿಶ್ವ ವಿದ್ಯಾನಿಲಯದ ಉಪಕುಲಪತಿ ಪ್ರೊ.ಕೆ.ಭೈರಪ್ಪ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ.ಕೆ.ವಿ.ರೇಣುಕಾಪ್ರಸಾದ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಪುತ್ತೂರು ಒಕ್ಕಲಿಗರ ಯಾನೆ ಗೌಡರ ಸಂಘದ ಅಧ್ಯಕ್ಷ ಇಡ್ಯಡ್ಕ ಮೋಹನ್ ಗೌಡ ಮುಖ್ಯ ಅತಿಥಿಗಳಾಗಿದ್ದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ನ.ಪಂ.ಅಧ್ಯಕ್ಷೆ ಶೀಲಾವತಿ ಮಾಧವ, ಉಬರಡ್ಕ ಗ್ರಾ.ಪಂ.ಅಧ್ಯಕ್ಷ ಹರೀಶ್ ಉಬರಡ್ಕ, ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸಾಟಿಯ ಅಧ್ಯಕ್ಷ ಚಂದ್ರ ಕೋಲ್ಚಾರು, ಕೊಡಗು ಮತ್ತು ದ.ಕ.ಗೌಡ ಸಂಘದ ಅಧ್ಯಕ್ಷ ರಾಜೇಶ್ ತೇನನ, ದ.ಕ.ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಮಂಗಳೂರು ತಾಲೂಕು ಒಕ್ಕಲಿಗರ ಯಾನೆ ಗೌಡರ ಸಂಘದ ಅಧ್ಯಕ್ಷ ಸುಕುಮಾರ್ ಯು.ಬಿ.ಎಸ್, ಬಂಟ್ವಾಳ ತಾಲೂಕು ಒಕ್ಕಲಿಗರ ಯಾನೆ ಗೌಡರ ಸಂಘದ ಅಧ್ಯಕ್ಷ ಲಿಂಗಪ್ಪ ಗೌಡ ಅಳಿಕೆ, ಪುತ್ತೂರು ತಾಲೂಕು ಒಕ್ಕಲಿಗರ ಯಾನೆ ಗೌಡರ ಸಂಘದ ಅಧ್ಯಕ್ಷ ಬೊಮ್ಮೆಟ್ಟಿ ನಾಗಪ್ಪ ಗೌಡ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಯಾನೆ ಗೌಡರ ಸಂಘದ ಅಧ್ಯಕ್ಷ ಜಿ.ಸೋಮೆ ಗೌಡ ಉಪಸ್ಥಿತರಿದ್ದರು.

 

More Images