ನಳಿನ್ ಯಾವ ಅಭಿವೃದ್ಧಿಯನ್ನೂ ಮಾಡಿಲ್ಲ: ಡಿ.ಕೆ.ಶಿವಕುಮಾರ್

ನಳಿನ್ ಯಾವ ಅಭಿವೃದ್ಧಿಯನ್ನೂ ಮಾಡಿಲ್ಲ: ಡಿ.ಕೆ.ಶಿವಕುಮಾರ್

HSA   ¦    Apr 15, 2019 02:18:43 PM (IST)
ನಳಿನ್ ಯಾವ ಅಭಿವೃದ್ಧಿಯನ್ನೂ ಮಾಡಿಲ್ಲ: ಡಿ.ಕೆ.ಶಿವಕುಮಾರ್

ಮಂಗಳೂರು: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಜಿಲ್ಲೆಯಲ್ಲಿ ಯಾವ ರೀತಿಯ ಅಭಿವೃದ್ಧಿಯನ್ನು ಮಾಡಿಲ್ಲ ಎಂದು ಕಾಂಗ್ರೆಸ್ ಮುಖಂಡ, ಸಚಿವ ಡಿ.ಕೆ.ಶಿವಕುಮಾರ್ ಆರೋಪಿಸಿದರು.

ಸೋಮವಾರ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ಸಂಸತ್ತಿನಲ್ಲಿ ಧ್ವನಿ ಎತ್ತಲು ಯುವ ನೇತಾರನ ಅಗತ್ಯವಿದೆ. ಹಾಗಾಗಿ ಮಿಥುನ್ ರೈ ಗೆಲ್ಲಿಸುವಂತೆ ಅವರು ಕರೆ ನೀಡಿದರು.

ಮಿಥುನ್ ಗೆ ಜಾತ್ಯತೀತ ತತ್ವದಲ್ಲಿ ನಂಬಿಕೆ ಇದೆ. ನಳಿನ್ ರಂತೆ ಜಿಲ್ಲೆಯಲ್ಲಿ ಬೆಂಕಿ ಹಚ್ಚುವ ಕೆಲಸವನ್ನು ಅವರು ಮಾಡಲ್ಲ, ಅಭಿವೃದ್ಧಿ ಮಾಡಿ ತೋರಿಸುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಮೇಯರ್ ಗಳಾದ ಭಾಸ್ಕರ ಮೊಯ್ಲಿ, ಮಹಾಬಲ ಮಾರ್ಲ, ಶಶಿಧರ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.