ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಣಿಪಾಲ ಎಂಐಟಿ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ವೆಂಕಟೇಶ್ ಎಂಬವರ ಪುತ್ರ ಅವಿನಾಶ್ ವೆಂಕಟೇಶ್ ಎಂದು ಗುರುತಿಸಲಾಗಿದೆ.
ಈತ ಎಂಐಟಿ ಕ್ಯಾಂಪಸ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಈತನನ್ನು ಮಣಿಪಾಲ ಆಸ್ಪತ್ರೆಗೆ ದಾಖಸುವ ಮಾರ್ಗ ಮಧ್ಯದ ವೇಳೆ ಕೊನೆಯುಸಿರೆಳೆದಿದ್ದಾನೆ.