ವಿಜಯೋತ್ಸವ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ

ವಿಜಯೋತ್ಸವ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ

HSA   ¦    May 25, 2019 07:15:39 PM (IST)
ವಿಜಯೋತ್ಸವ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ

ಮಂಗಳೂರು: ಕೇರಳದ ಕಾಸರಗೋಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ ವಿಜಯೋತ್ಸವ ಆಚರಣೆ ವೇಳೆ ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆಯು ತಲಪಾಡಿ ಬಳಿ ಇಂದು ಸಂಜೆ ನಡೆದಿದೆ.

ವಿಜಯೋತ್ಸವ ವೇಳೆ ಕರ್ನಾಟಕದ ಗಡಿಯೊಳಗೆ ಪ್ರವೇಶಿಸಿದ ಮುಸ್ಲಿಂ ಲೀಗ್ ಕಾರ್ಯಕರ್ತನನ್ನು ಪೊಲೀಸರು ತಡೆಯಲು ಪ್ರಯತ್ನಿಸಿದ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದೆ.

ಪರಿಸ್ಥಿತಿ ಕೈತಪ್ಪುತ್ತಿರುವುದರಿಂದ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ರಾಜ್ಯದ ಗಡಿಯೊಳಗೆ ನುಗ್ಗಿದ್ದ ಮುಸ್ಲೀಂ ಲೀಗ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ ಸುಮಾರು 50 ಬೈಕ್ ಗಳಲ್ಲಿ ಬಂದ ಮುಸ್ಲಿಂ ಲೀಗ್ ನ ಕಾರ್ಯಕರ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್, ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮೀ ಗಣೇಶ್ ಸಹಿತ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈ ಬಗ್ಗೆ ಕೇರಳ ಪೊಲೀಸರ ಜತೆಗೆ ಚರ್ಚೆ ನಡೆಯುತ್ತಿದೆ.