ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ: ಬ್ರಹ್ಮಕಲಶಾಭಿಷೇಕ ಸಂಪನ್ನ

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ: ಬ್ರಹ್ಮಕಲಶಾಭಿಷೇಕ ಸಂಪನ್ನ

MV   ¦    Mar 14, 2019 10:00:57 AM (IST)
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ: ಬ್ರಹ್ಮಕಲಶಾಭಿಷೇಕ ಸಂಪನ್ನ

ಬಂಟ್ವಾಳ: ಪೊಳಲಿ ಶ್ರೀ ದುರ್ಗಾಪರಮೇಶ್ವರಿ ಮತ್ತು ಸಪರಿವಾರ ಶ್ರೀ ರಾಜರಾಜೇಶ್ವರಿ ದೇವರುಗಳಿಗೆ ಬುಧವಾರ ಪ್ರಾತಃಕಾಲ 4ರಿಂದ ಪುಣ್ಯಾಹ, ಗಣಹೋಮ, ದ್ರವ್ಯಕಲಶಾಭಿಷೇಕ ನಡೆದು ಪೂರ್ವಾಹ್ನ 7.40ರಿಂದ 8.10ರ ಮೀನ ಲಗ್ನ ಸುಮುಹೂರ್ತದಲ್ಲಿ `ಬ್ರಹ್ಮಕಲಶಾಭಿಷೇಕ' ನಡೆಯಿತು. ಬಳಿಕ ಮಹಾಪೂಜೆ, ಪಲ್ಲಪೂಜೆ, ಮಧ್ಯಾಹ್ನ ಲಕ್ಷಾಂತರ ಜನರಿಗೆ ಅನ್ನಸಂತರ್ಪಣೆ ನಡೆದವು.

ಬೆಳಗ್ಗಿನಿಂದಲೇ ಭಕ್ತರದಂಡು ದೇವಳಕ್ಕೆ ಆಗಮಿಸಿದ್ದು, ಅಪರಾಹ್ನದ ವೇಳೆಗೆ ಕ್ಷೇತ್ರಕ್ಕೆ ಬಂದ ಭಕ್ತರ ಸಂಖ್ಯೆ ಸುಮಾರು ಒಂದೂವರೆ ಲಕ್ಷವನ್ನು ಮೀರಿತ್ತು. ಸಂಜೆಯ ಬಳಿಕವಂತೂ ಸಾವಿರಾರು ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಬಂದ ಭಕ್ತರು ರಾಜರಾಜೇಶ್ವರಿ ದೇವಿಯನ್ನು ಕಂಡು ಕಣ್ತುಂಬಿಕೊಂಡರು. ಯಾವುದೇ ರೀತಿಯ ನೂಕುನುಗ್ಗಲಾಗದಂತೆ ವಿವಿಧ ಸಮಿತಿಗಳು, ಸ್ವಯಂಸೇವಕರು ಶ್ರಮಿಸಿ, ಎಲ್ಲಾ ದಿನಗಳ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ ಬ್ರಹ್ಮಕಲಶೋತ್ಸವದ ಸಂದರ್ಭ ಕ್ಷೇತ್ರಕ್ಕೆ ಆಗಮಿಸಿ, ದರ್ಶನ ಪಡೆದರು.