ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಎರಡು ದಿನ ಸಂಚಾರ ನಿಷೇಧ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಎರಡು ದಿನ ಸಂಚಾರ ನಿಷೇಧ

HSA   ¦    Jun 13, 2018 09:47:17 AM (IST)
ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಎರಡು ದಿನ ಸಂಚಾರ ನಿಷೇಧ

ಮಂಗಳೂರು: ಗುಡ್ಡ ಕುಸಿದು ಸಂಚಾರಕ್ಕೆ ತೊಂದರೆಯಾದ ಹಿನ್ನೆಲೆಯಲ್ಲಿ ಮುಂದಿನ ಎರಡು ಕಾಲ ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಜೂನ್ 14ರ ತನಕ ಮಂಗಳೂರು ಮತ್ತು ಮೂಡಿಗೆರೆ ಎರಡೂ ಕಡೆಗಳಿಗೆ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ತಿಳಿಸಿದರು.

ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ವಾಹನ ಸವಾರರು ರಸ್ತೆ ಮಧ್ಯೆ ಸಿಲುಕಿ ಪರದಾಡುವಂತಾಯಿತು. ಮಂಗಳವಾರ ಸಂಜೆ ವೇಳೆಗೆ ರಸ್ತೆ ಸಂಚಾರಕ್ಕೆ ತೆರವುಗೊಳಿಸಲಾಯಿತು.

ಪೊಲೀಸರು, ಅಧಿಕಾರಿಗಳು, ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ, ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹಾಗೂ ಇತರರು ಸಿಲುಕಿದ್ದ ಪ್ರಯಾಣಿಕರಿಗೆ ಆಹಾರದ ವ್ಯವಸ್ಥೆ ಮಾಡಿದರು.