ಗಾಂಜಾ ಮಾರಾಟಕ್ಕೆ ಯತ್ನ: ಮೂವರ ಬಂಧನ

ಗಾಂಜಾ ಮಾರಾಟಕ್ಕೆ ಯತ್ನ: ಮೂವರ ಬಂಧನ

SV   ¦    Oct 11, 2018 08:00:17 PM (IST)
ಗಾಂಜಾ ಮಾರಾಟಕ್ಕೆ ಯತ್ನ: ಮೂವರ ಬಂಧನ

ಉಪ್ಪಿನಂಗಡಿ: ಕಾಲೇಜ್ ಕ್ಯಾಂಪಸ್ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸಿದ ಮೂವರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಿಂದ ರಿಕ್ಷಾದಲ್ಲಿ ತಂದು ಉಪ್ಪಿನಂಗಡಿ ಕಾಲೇಜು ಸಮೀಪದ ವ್ಯಕ್ತಿಗೆ ಮಾರಾಟ ಮಾಡುತ್ತಿದ್ದ ಮೂವರನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿ ವೇಳೆ ಪರಾರಿಯಾಗಲು ಯತ್ನಿಸಿದ ಅರೋಪಿಗಳನ್ನು ಹಿಂಬಾಲಿಸಿದ ಪೊಲೀಸರು, ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎರಡು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿದ್ದ ಸುಮಾರು 4 ಕೆಜಿ ಗಾಂಜಾ, ಒಂದು ಬೈಕ್ ಹಾಗೂ ರಿಕ್ಷಾ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More Images