ಸ್ವಚ್ಛಮೇವ ಜಯತೇ ಜನಾಂದೋಲನಕ್ಕೆ ಚಾಲನೆ

ಸ್ವಚ್ಛಮೇವ ಜಯತೇ ಜನಾಂದೋಲನಕ್ಕೆ ಚಾಲನೆ

MV   ¦    Jun 11, 2019 07:22:36 PM (IST)
ಸ್ವಚ್ಛಮೇವ ಜಯತೇ ಜನಾಂದೋಲನಕ್ಕೆ ಚಾಲನೆ

ಬಂಟ್ವಾಳ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ ಮಿಷನ್ ವತಿಯಿಂದ ಬಂಟ್ವಾಳ ತಾಲೂಕು ಪಂಚಾಯತ್ ಆಯೋಜನೆಯಲ್ಲಿ ಸ್ವಚ್ಛಮೇವ ಜಯತೇ ಎಂಬ ಜನಾಂದೋಲನ ಕಾರ್ಯಕ್ರಮಕ್ಕೆ ಬಾಳ್ತಿಲ ಗ್ರಾಪಂ ವಠಾರದಲ್ಲಿ ಮಂಗಳವಾರ ಚಾಲನೆ ನೀಡಲಾಯಿತು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಭಿಯಾನಕ್ಕೆ ಚಾಲನೆ ನೀಡಿ, ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು. ಬಳಿಕ ಮಾತನಾಡಿದ ಅವರು, ನಗರ ಪ್ರದೇಶಗಳಂತೆ ಗ್ರಾಮೀಣ ಪ್ರದೇಶಗಳಲ್ಲೂ ಸ್ವಚ್ಛತೆಯ ಅರಿವು ಮೂಡಿಸುವ ಕಾರ್ಯ ನಡೆಯಬೇಕು. ಈ ಅಭಿಯಾನಕ್ಕೆ ಎಲ್ಲ ಅಧಿಕಾರಿಗಳು ನೇತೃತ್ವ ವಹಿಸಿ ಗ್ರಾಮೀಣರಿಗೆ ಈ ವಿಚಾರ ತಲುಪುವಂತೆ ಮನದಟ್ಟು ಮಾಡಬೇಕು ಎಂದರು.

ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಬಂಗೇರ, ಜಿಲ್ಲಾ ಪಂಚಾಯತ್ ಸದಸ್ಯರಾದ ಕಮಲಾಕ್ಷಿ ಪೂಜಾರಿ, ತುಂಗಪ್ಪ ಬಂಗೇರ, ತಾಲೂಕು ಪಂಚಾಯತ್ ಸದಸ್ಯರಾದ ಲಕ್ಷ್ಮೀ ಗೋಪಾಲ ಅಚಾರ್ಯ, ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಸಹಾಯಕ ನಿರ್ದೇಶಕ ಪ್ರಶಾಂತ್ ಬಳಂಜ, ಗ್ರಾಮ ಪಂಚಾಯತ್ ಅಧ್ಯಕ್ಷ ವಿಠಲ ಉಪಸ್ಥಿತರಿದ್ದರು. ಮೋಹನ್ ಪಿ.ಎಸ್. ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು