ಕನ್ನಡ ನಾಡು, ನುಡಿಗೆ ಶ್ರಮಿಸಿದ 12 ಮಂದಿಗೆ ಆಳ್ವಾಸ್ ನುಡಿಸಿರಿ ಪ್ರಶಸ್ತಿ

ಕನ್ನಡ ನಾಡು, ನುಡಿಗೆ ಶ್ರಮಿಸಿದ 12 ಮಂದಿಗೆ ಆಳ್ವಾಸ್ ನುಡಿಸಿರಿ ಪ್ರಶಸ್ತಿ

DSK   ¦    Nov 08, 2018 11:20:05 AM (IST)
ಕನ್ನಡ ನಾಡು, ನುಡಿಗೆ ಶ್ರಮಿಸಿದ 12 ಮಂದಿಗೆ ಆಳ್ವಾಸ್ ನುಡಿಸಿರಿ ಪ್ರಶಸ್ತಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಆಳ್ವಾಸ್ ನುಡಿಸಿರಿ 2018ರ ಅಂಗವಾಗಿ ಕೊಡಲ್ಪಡುವ ಆಳ್ವಾಸ್ ನುಡಿಸಿರಿ ಪುರಸ್ಕಾರವನ್ನು ಈ ಬಾರಿ ಕನ್ನಡ ನಾಡು, ನುಡಿಗೆ ಶ್ರಮಿಸಿದ 12 ಮಂದಿ ಸಾಧಕರಿಗೆ ನೀಡಿ ಗೌರವಿಸಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಡಾ.ಜಿ.ಡಿ ಜೋಶಿ ಮುಂಬೈ(ಸಾಹಿತ್ಯ, ಶಿಕ್ಷಣ), ಡಾ.ಎ.ವಿ.ನರಸಿಂಹಮೂರ್ತಿ ಮೈಸೂರು(ಇತಿಹಾಸ ತಜ್ಞ), ಡಾ. ಭಾರತಿ ವಿಷ್ಣುವರ್ಧನ ಬೆಂಗಳೂರು( ಸಿನಿಮಾ), ಡಾ. ಅರುಂಧತಿ ನಾಗ್ (ರಂಗಭೂಮಿ), ಎಲ್.ಬಂದೇನವಾಜಖಲೀಫ್ ಆಲ್ದಾಳ ಕಲಬುರಗಿ (ರಂಗ ನಿರ್ದೇಶನ), ಡಾ.ಕೆ.ರಮಾನಂದ ಬನಾರಿ ಕಾಸರಗೋಡು( ಸಾಹಿತ್ಯ), ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ( ಸಾಹಿತ್ಯ, ವಿಮರ್ಶೆ), ಪ್ರೊ. ಎ.ವಿ ನಾವಡ ಮಂಗಳೂರು( ಸಾಹಿತ್ಯ), ಫಾದರ್ ಪ್ರಶಾಂತ್ ಮಾಡ್ತ( ಸಾಹಿತ್ಯ ಸೇವೆ) ಹೊ.ನಾ.ರಾಘವೇಂದ್ರ (ಸುಗಮ ಸಂಗೀತ), ಅರುವಕೊರಗಪ್ಪ ಶೆಟ್ಟಿ(ಯಕ್ಷಗಾನ) ಡಾ. ಮೈಸೂರು ನಟರಾಜ, ವಾಷಿಂಗ್‍ಟನ್ (ಸಾಹಿತ್ಯ ಸೇವೆ) ಪ್ರಶಸ್ತಿಗೆ ಆಯ್ಕೆಯಾದ ಸಾಧಕರು. ನವೆಂಬರ್ 18ರ ಭಾನುವಾರ ಮಧ್ಯಾಹ್ನ 4ರಿಂದ ಆಳ್ವಾಸ್ ನುಡಿಸಿರಿ ಸಮಾರೋಪ ಸಮಾರಂಭದಲ್ಲಿ ಸಾಧಕರನ್ನು 25,000 ನಗದು ಪುರಸ್ಕಾರ, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ.

ಆಳ್ವಾಸ್ ನುಡಿಸಿರಿ ಸ್ವಾಗತ ಸಮಿತಿಯ ಕಾರ್ಯದರ್ಶಿ ವೇಣುಗೋಪಾಲ್ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪಿಆರ್‍ಒ ಡಾ.ಪದ್ಮನಾಭ ಶೆಣೈ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

More Images