ಮೀನು ಸಂಸ್ಕರಣಾ ಘಟಕಗಳ ಮೇಲೆ ಐಟಿ ದಾಳಿ

ಮೀನು ಸಂಸ್ಕರಣಾ ಘಟಕಗಳ ಮೇಲೆ ಐಟಿ ದಾಳಿ

Feb 12, 2018 05:50:56 PM (IST)
ಮೀನು ಸಂಸ್ಕರಣಾ ಘಟಕಗಳ ಮೇಲೆ ಐಟಿ ದಾಳಿ

ಮಂಗಳೂರು: ಮೀನು ಸಂಸ್ಕರಣಾ ಘಟಕಗಳ ಮೇಲೆ ದಾಳಿ ನಡೆಸಿರುವ ತೆರಿಗೆ ಇಲಾಖೆ ಅಧಿಕಾರಿಗಳು ಸುಮಾರು 185 ಕೋಟಿ ಅಕ್ರಮ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ಮಂಗಳೂರು, ಉಡುಪಿ, ಹುಬ್ಬಳ್ಳಿ ಮತ್ತು ಬೆಂಗಳೂರಿನಲ್ಲಿ ಈ ದಾಳಿ ನಡೆದಿದೆ. ಸುಮಾರು 150ಕ್ಕೂ ಹೆಚ್ಚು ತೆರಿಗೆ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ.

ತೆರಿಗೆ ವಂಚನೆ ಮಾಡಿರುವಂತಹ ಮೀನು ಸಂಸ್ಕರಣಾ ಘಟಕಗಳ ಮೇಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಮತ್ಸೋದ್ಯಮಿಗಳು ಮತ್ತು ಮಧ್ಯವರ್ತಿಗಳ ಮೇಲೆ ದಾಳಿ ಐಟಿ ದಾಳಿ ನಡೆದಿದೆ.