ಉಡುಪಿಯಲ್ಲಿ ಇಬ್ಬರು ಶಂಕಿತ ಉಗ್ರರ ಸೆರೆ

ಉಡುಪಿಯಲ್ಲಿ ಇಬ್ಬರು ಶಂಕಿತ ಉಗ್ರರ ಸೆರೆ

HSA   ¦    Jan 14, 2020 04:37:30 PM (IST)
ಉಡುಪಿಯಲ್ಲಿ ಇಬ್ಬರು ಶಂಕಿತ ಉಗ್ರರ ಸೆರೆ

ಉಡುಪಿ: ಕೇರಳದಿಂದ ಬಂದಿದ್ದ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಮಂಗಳವಾರ ಬೆಳಗ್ಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಬಂಧಿತರಿಬ್ಬರ ವಿವರಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಇವರನ್ನು ಅಜ್ಞಾತ ಸ್ಥಳದಲ್ಲಿರಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಉಗ್ರರನ್ನು ಬಂಧಿಸಿದ ವಿಚಾರವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಚಿಕ್ಕಮಗಳೂರಿನಲ್ಲಿ ಖಚಿತಪಡಿಸಿದ್ದಾರೆ.