ಕಳಪೆ ರಸ್ತೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ

ಕಳಪೆ ರಸ್ತೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ

LK   ¦    Sep 11, 2018 06:43:33 PM (IST)
ಕಳಪೆ ರಸ್ತೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ

ಚಾಮರಾಜನಗರ: ಲೋಕೋಪಯೋಗಿ ಇಲಾಖೆಯಿಂದ ತಾಲೂಕಿನ ಕುದೇರು ಗ್ರಾಮದ ಸಮೀಪ ನಡೆಯುತ್ತಿರುವ ರಸ್ತೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಚಾಮರಾಜನಗರ ತಾಲೂಕಿನ ಕುದೇರು ಗ್ರಾಮದ ಬಳಿ ಲೋಕೋಪಯೋಗಿ ಇಲಾಖೆ ನಿರ್ಮಾಣ ಮಾಡಿರುವ ರಸ್ತೆ ಸಂಪೂರ್ಣ ಕಳಪೆಯಾಗಿದ್ದು, ಕೈಯಿಂದ ಕಿತ್ತರೆ ಡಾಂಬರು ಬರುತ್ತಿದೆ. ಇದನ್ನು ಕಂಡ ಜನ ಆಕ್ರೋಶಗೊಂಡಿದ್ದು, ಈ ರೀತಿಯ ಕಳಪೆ ಕಾಮಗಾರಿ ಮಾಡುವುದಾದರೆ ನಮಗೆ ರಸ್ತೆಯ ಅಗತ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಸೇರಿದ್ದ ರೈತರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಇಲಾಖೆಯ ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿದರು.

ರಸ್ತೆ ಕಾಮಗಾರಿ ನಡೆದ ಕೆಲವೇ ದಿನಗಳಲ್ಲೇ ರಸ್ತೆ ಕಿತ್ತು ಬರುತ್ತಿದ್ದು, ನಿಗದಿತ ಪ್ರಮಾಣದಲ್ಲಿ ಕಚ್ಚಾ ಸಾಮಗ್ರಿ ಹಾಕದೇ ಇರುವುದೇ ಕಳಪೆ ಕಾಮಗಾರಿಗೆ ಕಾರಣವಾಗಿದೆ. ಇಂಜಿನೀಯರ್‍ ಗಳು ಕಳಪೆ ಕಾಮಗಾರಿ ನಡೆಯಲು ಸಹಕಾರ ನೀಡಿ ಗುತ್ತಿಗೆದಾರರ ಭ್ರಷ್ಟಚಾರಕ್ಕೆ ಕೈ ಜೋಡಿಸಿದ್ದಾರೆ ಎಂದು ಆರೋಪಿಸಿದರು.

More Images