ಮಠಕ್ಕೆ ಭೇಟಿ ನೀಡಿ ಶಿವಕುಮಾರ್ ಸ್ವಾಮೀಜಿ ಆರೋಗ್ಯ ವಿಚಾರಿಸಿದ ಉಪಮುಖ್ಯಮಂತ್ರಿ

ಮಠಕ್ಕೆ ಭೇಟಿ ನೀಡಿ ಶಿವಕುಮಾರ್ ಸ್ವಾಮೀಜಿ ಆರೋಗ್ಯ ವಿಚಾರಿಸಿದ ಉಪಮುಖ್ಯಮಂತ್ರಿ

YK   ¦    Dec 06, 2018 12:53:20 PM (IST)
ಮಠಕ್ಕೆ ಭೇಟಿ ನೀಡಿ ಶಿವಕುಮಾರ್ ಸ್ವಾಮೀಜಿ ಆರೋಗ್ಯ ವಿಚಾರಿಸಿದ ಉಪಮುಖ್ಯಮಂತ್ರಿ

ಬೆಂಗಳೂರು: ಸೋಮವಾರ ಬೆಳಿಗ್ಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿ ಚೇತರಿಸಿಕೊಳ್ಳುತ್ತಿರುವ ಸಿದ್ದಗಂಗಾ ಮಠದ ಡಾ. ಶಿವಕುಮಾರ್ ಸ್ವಾಮೀಜಿ ಅವರನ್ನು  ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಗುರುವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಸ್ವಾಮೀಜಿ ಜತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಎಂದಿನಂತಯೇ ಸ್ವಾಮೀಜಿ ನಮ್ಮಲ್ಲಿ ಮಾತನಾಡಿದ್ದಾರೆ.  ವೈದ್ಯರು ಚಿಕಿತ್ಸೆ ನೀಡಿದ್ದು, ಸ್ವಾಮೀಜಿ ಆರಾಮಾಗಿದ್ದಾರೆ.

ಬುಧವಾರ ರಾತ್ರಿ ಸ್ವಾಮೀಜಿಗೆ ಸ್ವಲ್ಪ ಜ್ವರ ಕಾಣಿಸಿಕೊಂಡಿದೆ. ಸ್ವಾಮೀಜಿಯ ವೈದ್ಯಕೀಯ ವರದಿಗಳೊಂದಿಗೆ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯರು ಚೆನ್ನೈನಲ್ಲಿರುವ ತಜ್ಞ ವೈದ್ಯರ ಜತೆ ಸ್ವಾಮೀಜಿ ಚಿಕಿತ್ಸೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ತೆರಳಿದ್ದಾರೆ. ನಂತರ ಎಲ್ಲ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ಇದೀಗ ಸ್ವಾಮೀಜಿ ಆರಾಮಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.