ಫೈನಲ್ ನಲ್ಲಿ ಭಾರತ ಗೆಲ್ಲಲಿ...ಅಭಿಮಾನಿಗಳಿಂದ ವಿಶೇಷ ಪೂಜೆ

ಫೈನಲ್ ನಲ್ಲಿ ಭಾರತ ಗೆಲ್ಲಲಿ...ಅಭಿಮಾನಿಗಳಿಂದ ವಿಶೇಷ ಪೂಜೆ

Jun 17, 2017 02:51:57 PM (IST)

ಮೈಸೂರು: ನಾಳೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಭಾರತ ವಿಜಯಯಾಗಲಿ ಎಂದು ನಗರದ ಕ್ರಿಕೆಟ್ ಅಭಿಮಾನಿಗಳು ಗಣಪತಿ ದೇವಾಲಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಶುಭ ಹಾರೈಸಿದರು.

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ ನಾಳೆ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಕ ಎದುರಾಳಿ ಪಾಕಿಸ್ತಾನ ತಂಡವನ್ನ ಎದುರಸಲಿದ್ದು, ಹೈಹೋಲ್ಟೇಜ್ ಪಂದ್ಯವಾಗಿದೆ.

ಈ ಪಂದ್ಯದಲ್ಲಿ ಭಾರತ ತಂಡ ಗೆದ್ದು ಸತತ ಎರಡನೇ ಬಾರಿ ಚಾಂಪಿಯನ್ಸ್ ಟ್ರೋಫಿಯನ್ನ ಭಾರತಕ್ಕೆ ತರಲಿ ಎಂದು ಕ್ರಿಕೆಟ್ ಅಭಿಮಾನಿಗಳು ನಗರದ ಗಣಪತಿ ದೇವಸ್ಥಾನ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶುಭ ಹಾರೈಸಿದರು.

ಇದೇ ವೇಳೆ ಕ್ರಿಕೆಟ್ ಅಭಿಮಾನಿಗಳು ಭಾರತ ತಂಡದ ಪರವಾಗಿ ಜಯಘೋಷಣೆಗಳನ್ನು ಕೂಗಿದರು.