ಮೈಸೂರಿನಲ್ಲಿ ಬಿಎಸ್ಪಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

ಮೈಸೂರಿನಲ್ಲಿ ಬಿಎಸ್ಪಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

HSA   ¦    Mar 14, 2019 06:00:44 PM (IST)
ಮೈಸೂರಿನಲ್ಲಿ ಬಿಎಸ್ಪಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

ಮೈಸೂರು: ಕಾಂಗ್ರೆಸ್ ಜತೆಗೆ ಯಾವ ರಾಜ್ಯದಲ್ಲೂ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದು ಹೇಳಿರುವ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದ ಮುಖ್ಯಸ್ಥೆ ಮಾಯಾವತಿ ಅವರು ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಸಲಿರುವರು.

ಎಪ್ರಿಲ್ 10ರಂದು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಎಸ್ಪಿ ಬೃಹತ್ ಸಮಾವೇಶ ನಡೆಸಲಿದೆ ಎಂದು ಬಿಎಸ್ಪಿ ಮೂಲಗಳು ಹೇಳಿವೆ.

ಸಮಾವೇಶದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಬಿಎಸ್ಪಿ ಶಾಸಕ ಎನ್. ಮಹೇಶ್ ಅವರು ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯುಪಿ ಸಂಸದರು, ಮಾಜಿ ಸಚಿವರು ಹಾಗೂ ರಾಜ್ಯ ಬಿಎಸ್ಪಿ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಒಂದು ಲಕ್ಷ ಜನರು ಸೇರುವ ನಿರೀಕ್ಷೆಯಿದೆ ಎಂದು ಮಹೇಶ್ ತಿಳಿಸಿದರು.