ಮೈಸೂರು: ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್

ಮೈಸೂರು: ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್

MY   ¦    Nov 07, 2018 05:56:34 PM (IST)
ಮೈಸೂರು: ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ನವೆಂಬರ್ 17 ರಂದು ಮೇಯರ್ ಚುನಾವಣೆ ನಡೆಯಲಿದೆ.

ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ದಿನಾಂಕ ನಿಗದಿ ಕುರಿತು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇಂದು ಸಭೆ ನಡೆದಿದ್ದು, ಪ್ರಾದೇಶಿಕ ಆಯುಕ್ತ ಯಶ್ವಂತ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ , ಪಾಲಿಕೆ ಆಯುಕ್ತ ಜಗದೀಶ್, ಡಿಸಿಪಿ ವಿಷ್ಣುವರ್ಧನ್ ಮುಂತಾದ ಮುಂತಾದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಭೆಯಲ್ಲಿ ಚುನಾವಣೆ ಬಗ್ಗೆ ಮಾತುಕತೆ ನಡೆಸಿದರು. ಸಭೆಯಲ್ಲಿ ಇದೇ ನವೆಂಬರ್ 17 ರಂದು ಮೇಯರ್ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.