ಜಯನಗರ ಗೆಲುವಿನ ಬಗ್ಗೆ ಸಿದ್ದರಾಮಯ್ಯ ಹೀಗ್ಯಾಕೆ ಹೇಳಿದರು?

ಜಯನಗರ ಗೆಲುವಿನ ಬಗ್ಗೆ ಸಿದ್ದರಾಮಯ್ಯ ಹೀಗ್ಯಾಕೆ ಹೇಳಿದರು?

MY   ¦    Jun 13, 2018 02:47:49 PM (IST)
ಜಯನಗರ ಗೆಲುವಿನ ಬಗ್ಗೆ ಸಿದ್ದರಾಮಯ್ಯ ಹೀಗ್ಯಾಕೆ ಹೇಳಿದರು?

ಮೈಸೂರು: ಜಯನಗರದ ಗೆಲುವು ಮೈತ್ರಿ ಸರ್ಕಾರದ ಗೆಲುವಲ್ಲ, ಇಸ್ ಎ ವಿಕ್ಟರಿ ಆಫ್ ಕಾಂಗ್ರೆಸ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದರು.

ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ಮೈಸೂರು ಮತ್ತು ಚಾಮರಾಜ ನಗರ ಜಿಲ್ಲೆಯಲ್ಲಿ ಸೋತ ಮತ್ತು ಗೆದ್ದ ಅಭ್ಯರ್ಥಿಗಳೊಂದಿಗೆ ಆತ್ಮಾವಲೋಕನ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ, ಜಯನಗರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಗೆಲುವು ನೀರಿಕ್ಷೆ ಇತ್ತು. ನಮ್ಮ ನೀರಿಕ್ಷೆಯ ಪ್ರಕಾರ ಗೆಲುವು ಸಾಧಿಸಿದ್ದಾರೆ. ಸೌಮ್ಯ ರೆಡ್ಡಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಗೆಲುವಿಗೆ ಕಾರಣರಾದ ಹಾಗೂ ಚುನಾವಣೆಯಲ್ಲಿ ಕೆಲಸ ಮಾಡಿದ ನಮ್ಮ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಗೆಲುವು ಮೈತ್ರಿ ಸರ್ಕಾರದ ಗೆಲುವಲ್ಲ. ಕಾಂಗ್ರೆಸ್ ಸರ್ಕಾರದ ಗೆಲುವು ಎಂದ ಮಾಜಿ ಸಿಎಂ ಸಿದ್ದರಾಮಯ್ಯ, ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ದರಾಗಿರಬೇಕು ಎಂದರು.