ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

MY   ¦    May 14, 2018 04:53:27 PM (IST)
ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

ಮೈಸೂರು: ಕೆ.ಆರ್. ನಗರದಲ್ಲಿ ಕ್ಷೇತ್ರದಲ್ಲಿ ಚುನಾವಣೆ ಮುಗಿಯುತ್ತಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನೆಡಿದಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ನಿನ್ನೆ ತಡರಾತ್ರಿ ಮಾಯಿಗೌಡನಹಳ್ಳಿಯಲ್ಲಿ ನಡೆದಿದೆ.

ಜಿಲ್ಲೆಯ ಕೆ.ಆರ್ ನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿರುವ ಸಾ.ರಾ ಮಹೇಶ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಡಿ.ರವಿಶಂಕರ್ ನಡುವೆ ಚುನಾವಣೆಯಲ್ಲಿ ನೇರಾ ನೇರಾ ಸ್ಪರ್ಧೆ ಏರ್ಪಟ್ಟಿತ್ತು. ಚುನಾವಣೆಗೆ ಹಿಂದಿನ ದಿನ ಪಕ್ಷೇತರ ಅಭ್ಯರ್ಥಿ ಹೊಸಳ್ಳಿ ವೆಂಕಟೇಶ್ ಅವರ ಮೇಲು ಹಲ್ಲೆ ನಡೆದ ಪರಿಣಾಮ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದರ ಮಧ್ಯೆ ಚುನಾವಣಾ ಮುಕ್ತವಾದ ಬಳಿಕ ನಿನ್ನೆ ತಡರಾತ್ರಿ ಮಾಯಿಗೌಡನ ಹಳ್ಳಿಯಲ್ಲಿ ಶಾಸಕ ಸಾ ರಾ ಮಹೇಶ್ ಪರವಾಗಿ ಕೆಲಸ ಮಾಡಿದಕ್ಕೆ ಕಾಂಗ್ರೆಸ್ ಕಾರ್ಯರ್ತರು ಜೆಡಿಎಸ್ ಕಾರ್ಯಕರ್ತರ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದು, ಜೆಡಿಎಸ್ ಕಾರ್ಯಕರ್ತರಾದ ಪಣಿ ಅಲಿಯಾಸ್ ಪಟೇಲಾ, ಕುಮಾರ, ಅಶೋಕ , ನಟರಾಜ್, ಶಿವಕುಮಾರ್ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಕೆ.ಆರ್ ನಗರದ ಸಾರ್ವಜನಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿದೆ.

ಈ ಸಂಬಂಧ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.