ಪ್ರೇಮಿ ಎದುರಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರೇಮಿ ಎದುರಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

HSA   ¦    May 09, 2019 02:09:11 PM (IST)
ಪ್ರೇಮಿ ಎದುರಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಮೈಸೂರು: ಪ್ರೇಮಿಯ ಎದುರಿನಲ್ಲೇ ಆರು ಮಂದಿಯ ತಂಡವೊಂದು ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆಯು ಮೈಸೂರಿನ ಲಿಂಗಾಂಬುಧಿ ಕೆರೆ ಸಮೀಪ ನಿನ್ನೆ ತಡರಾತ್ರಿ ವೇಳೆ ನಡೆದಿದೆ.

ಬುಧವಾರ ರಾತ್ರಿ ಸುಮಾರು ಹತ್ತು ಗಂಟೆ ವೇಳೆ ಜೋಡಿಯು ಕೆರೆ ಸಮೀಪ ಏಕಾಂತದಲ್ಲಿತ್ತು. ಈ ವೇಳೆ ಅವರಿಬ್ಬರ ಮೇಲೆ ಹಲ್ಲೆ ಮಾಡಿದ ಯುವಕರ ಗುಂಪು, ಬಳಿಕ ಯುವಕನನ್ನು ಕಟ್ಟಿ ಹಾಕಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಎಸ್.ಪಿ. ಅಮಿತ್ ಸಿಂಗ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮೈಸೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅತ್ಯಾಚಾರಿಗಳ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ.