ಸತತ ನಾಲ್ಕನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಮರಿತಿಬ್ಬೇಗೌಡ ಆಯ್ಕೆ

ಸತತ ನಾಲ್ಕನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಮರಿತಿಬ್ಬೇಗೌಡ ಆಯ್ಕೆ

MY   ¦    Jun 13, 2018 09:37:35 AM (IST)
ಸತತ ನಾಲ್ಕನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಮರಿತಿಬ್ಬೇಗೌಡ ಆಯ್ಕೆ

ಮೈಸೂರು: ತೀವ್ರ ಕೂತುಹಲ ಕೆರಳಿಸಿದ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಸತತ ನಾಲ್ಕನೇ ಬಾರಿಗೆ ಮರಿತಿಬ್ಬೇಗೌಡ ಅವರು 11022 ಮತಗಳನ್ನು ಪಡೆಯುವ ಮೂಲಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಮರಿತಿಬ್ಬೇಗೌಡ 11022 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಲಕ್ಷ್ಮಣ್ ಅವರ ವಿರುದ್ದ ಗೆಲುವು ದಾಖಲಿಸಿದ್ದಾರೆ. ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಮರಿತಿಬ್ಬೇಗೌಡ ಎರಡನೇ ಪ್ರಾಶಸ್ತ್ಯದ ಮತಗಳ ಎಣಿಕೆಯಲ್ಲಿ ಗೆಲುವು ಸಾಧಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯೆ ಮರಿತಿಬ್ಬೇಗೌಡ, ಸತತ ನಾಲ್ಕನೇ ಬಾರಿಗೆ ಶಿಕ್ಷಕರ ಕ್ಷೇತ್ರದಿಂದ ಆಯ್ಕೆ ಮಾಡಿದ ಶಿಕ್ಷಕ ಬಂಧುಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನನ್ನ ಗೆಲುವು ಶಿಕ್ಷಕರ ಗೆಲುವು. ಈ ಗೆಲುವನ್ನು ಮೈತ್ರಿ ಗೆಲುವೆಂದು ಭಾವಿಸುತ್ತೇನೆ. ಮೈತ್ರಿ ಸರ್ಕಾರದಲ್ಲಿ ಶಿಕ್ಷಕ ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಹಾಗೂ ಶೈಕ್ಷಣಿಕ ವ್ಯವಸ್ಥೆಯನ್ನು ಉತ್ತಮಗೊಳಿಸಲು ಪ್ರಥಮ ಆದ್ಯತೆಯಲ್ಲಿ ಮಾಡಲು ಪ್ರಯತ್ನ ಮಾಡುತ್ತೇನೆ.

ಕಳೆದ ಮೂರು ಅವಧಿಯಲ್ಲಿ ವಿರೋಧ ಪಕ್ಷದಲ್ಲಿ ಕೆಲಸ ಮಾಡಬೇಕಾಗಿ ಬಂತು. ಆದರೆ ಜೆಡಿಎಸ್ ವರಿಷ್ಟರು ವಿಧಾನ ಪರಿಷತ್ತಿನ ಉಪಸಭಾಪತಿಯಾಗಿ ಕೆಲಸ ಮಾಡುವ ಅವಕಾಶ ಕೊಟ್ಟರು. ಈ ಬಾರಿ ನಮ್ಮದೇ ಸರ್ಕಾರ ಇದೆ. ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಡಾ.ಜಿ.ಪರಮೇಶ್ವರ್ ಉಪಮುಖ್ಯಮಂತ್ರಿ ಆಗಿದ್ದಾರೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಿಕ್ಷಕರು, ವಿದ್ಯಾರ್ಥಿಗಳ ಮೂಲ ಸೌಕರ್ಯಕ್ಕೆ ದುಡಿಯುತ್ತೇನೆ. ಜೆಡಿಎಸ್ ವರಿಷ್ಠರು, ಬಿಎಸ್ಪಿ ನಾಯಕ ಎನ್.ಮಹೇಶ್ ಅವರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು.

More Images