ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ

ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ

YK   ¦    Jun 04, 2019 01:22:36 PM (IST)
ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ

ಮೈಸೂರು: ಜೆಡಿಎಸ್ ಪಕ್ಷ ಹಾಗೂ ಕಾಂಗ್ರೆಸ್ ಮುಖಂಡರ ನಡವಳಿಕೆಗೆ ಬೇಸತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ಎಂದು ರಾಜೀನಾಮೆ ಘೋಷಿಸಿದ್ದಾರೆ.

ಮೈಸೂರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈತ್ರಿ ಸರ್ಕಾರದ ನಾಯಕರ ನಡವಳಿಗೆ ಹಾಗೂ ಕಾಂಗ್ರೆಸ್ ನಾಯಕರ ಮಾತುಗಳಿಂದ ಬೇಸತ್ತು ಈ ನಿರ್ಧಾರ ಕೈಗೊಂಡಿದ್ದೇನೆ.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸೋಲನ್ನು ಅನುಭವಿಸಲು ಕಾಂಗ್ರೆಸ್ ನಾಯಕರ ಕೊಂಕು ಮಾತುಗಳು. ಈ ಎಲ್ಲ ಕಾರಣಗಳಿಂದ ಬೇಸತ್ತು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದರು.