ಸಿದ್ದರಾಮಯ್ಯಗೆ ಜನತೆ ತಕ್ಕ ಪಾಠ ಕಲಿಸಿದ್ದಾರೆ: ಶ್ರೀನಿವಾಸ್ ಪ್ರಸಾದ್

ಸಿದ್ದರಾಮಯ್ಯಗೆ ಜನತೆ ತಕ್ಕ ಪಾಠ ಕಲಿಸಿದ್ದಾರೆ: ಶ್ರೀನಿವಾಸ್ ಪ್ರಸಾದ್

HSA   ¦    May 24, 2019 04:53:10 PM (IST)
ಸಿದ್ದರಾಮಯ್ಯಗೆ ಜನತೆ ತಕ್ಕ ಪಾಠ ಕಲಿಸಿದ್ದಾರೆ: ಶ್ರೀನಿವಾಸ್ ಪ್ರಸಾದ್

ಮೈಸೂರು: ಸಿದ್ದರಾಮಯ್ಯ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.

ನಮಗೆ ಗೆಲುವು ಅಷ್ಟು ಸುಲಭವಾಗಿ ಇರಲಿಲ್ಲ. ಕಾಂಗ್ರೆಸ್ ಭದ್ರಕೋಟೆಯಾಗಿರುವಂತಹ ವರುಣ, ಟಿ.ನರಸೀಪುರ, ಹೆಚ್.ಡಿ.ಕೋಟೆ ಸೇರಿದಂತೆ ಹಲವು ಭಾಗಗಳಲ್ಲಿ ಬಿಜೆಪಿ ಅಸ್ತಿತ್ವ ಕಂಡುಕೊಂಡಿದೆ ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ನನ್ನನ್ನು ಗೆಲ್ಲಿಸಿಕೊಟ್ಟ ಕ್ಷೇತ್ರದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ಸಚಿವ ಸ್ಥಾನದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅದು ಕೇಂದ್ರದ ನಾಯಕರಿಗೆ ಬಿಟ್ಟಿರುವ ವಿಚಾರ ಎಂದರು.