ರಾಜ್ಯದ ರಸ್ತೆಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಮಹದೇವಪ್ಪ

ರಾಜ್ಯದ ರಸ್ತೆಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಮಹದೇವಪ್ಪ

LK   ¦    Jan 12, 2018 05:30:01 PM (IST)
ರಾಜ್ಯದ ರಸ್ತೆಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಮಹದೇವಪ್ಪ

ಮಳವಳ್ಳಿ: ರಾಜ್ಯದ ಎಲ್ಲ ರಸ್ತೆಗಳ ಸಮಗ್ರ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಿರುವುದಾಗಿ ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ತಿಳಿಸಿದರು.

ಪಟ್ಟಣದ ಕನಸದಾಸ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಸರ್ಕಾರದ ಸಾಧನಾ ಸಮಾವೇಶ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗುತ್ತಿಗೆ ನೀಡುವಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲು ಜಾರಿಗೊಳಿಸಿದ ಮೊದಲ ಸರ್ಕಾರ ನಮ್ಮದಾಗಿದೆ.

ಪ.ಜಾತಿ ಮತ್ತು ವರ್ಗದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸಂವಿಧಾನದಲ್ಲಿ ತಿಳಿಸಿರುವಂತೆ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ತುಳಿತಕ್ಕೊಳಗಾದ ಜನರನ್ನು ಮುಖ್ಯವಾಹಿನಿಗೆ ತರುವಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ವಸತಿ, ಶಿಕ್ಷಣ, ಆರೋಗ್ಯ, ರಸ್ತೆ, ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಹೊಂದಿರುವ ಕಾಂಗ್ರೆಸ್ ಸರ್ಕಾರ ಒಂದು ನಾಗರಿಕ ಸರ್ಕಾರ ಎಂದು ಬಣ್ಣಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಂ. ಕೃಷ್ಣಪ್ಪ ಮಾತನಾಡಿ, ಎಲ್ಲಾ ವರ್ಗದವರಿಗೆ ಸಮನಾದ ಬಾಳನ್ನು ಕಲ್ಪಿಸುವ ಉದ್ದೇಶದಿಂದ ವೈವಿಧ್ಯತೆಯಲ್ಲಿ ಏಕತೆಯನ್ನು ಸಮಾನತೆಯ ರೂಪದಲ್ಲಿ ಜಾರಿಗೊಳಿಸಿದ್ದೇವೆ. ಸರ್ವ ಜನಾಂಗದವರ ಹಿತವನ್ನು ದೃಷ್ಠಿಯಲ್ಲಿಟ್ಟುಕೊಂಡು ಕಾರ್ಯಕ್ರಮ ನಡೆಸಲಾಗುತ್ತಿದ್ದು, ಒಳ್ಳೆಯ ಕೆಲಸ ಮಾಡುವವರನ್ನು ಜನರು ಆಶೀರ್ವಾದ ಮಾಡುವಂತೆ ಮನವಿ ಮಾಡಿದರು.