ಮೈಸೂರಿನಲ್ಲಿ ಕೊರೊನಾ ಸೋಂಕು ಪ್ರಕರಣ ಇಲ್ಲ

ಮೈಸೂರಿನಲ್ಲಿ ಕೊರೊನಾ ಸೋಂಕು ಪ್ರಕರಣ ಇಲ್ಲ

MY   ¦    Mar 17, 2020 05:19:05 PM (IST)
ಮೈಸೂರಿನಲ್ಲಿ ಕೊರೊನಾ ಸೋಂಕು ಪ್ರಕರಣ ಇಲ್ಲ

ಮೈಸೂರು: ಕೋವಿಡ್-19 ಪ್ರಕರಣದ ಹಿನ್ನಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಮಂಗಳವಾರ 127 ಜನರ ಮೇಲೆ ನಿಗಾ ವಹಿಸಲಾಗಿದೆ.

ಈ ಪೈಕಿ 65 ಜನರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಈವರೆಗೆ 62 ಮಂದಿ 14 ದಿನಗಳ ಹೋಮ್ ಐಸೋಲೇಶನ್ ಅನ್ನು ಮುಕ್ತಾಯಗೊಳಿಸಿ, ಕೊರೊನಾ ಸೋಂಕು ಇಲ್ಲ ಎಂದು ದೃಢಪಟ್ಟ ಹಿನ್ನೆಲೆಯಲ್ಲಿ ಗೃಹ ದಿಗ್ಬಂಧನದಿಂದ ಬಿಡುಗಡೆ ಮಾಡಲಾಗಿದೆ.

ಒಟ್ಟು 16 ಜನರ ಸ್ಯಾಂಪಲ್ ಪರೀಕ್ಷೆಗೆ ಒಳಪಡಿಸಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಅವರಿಗೆ ಯಾವುದೇ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ. ಸಾರ್ವಜನಿಕರು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಜಿಲ್ಲಾಡಳಿತ ಸಹಾಯವಾಣಿ ಸಂಖ್ಯೆ 1077 ಹಾಗೂ ಆರೋಗ್ಯ ಸಹಾಯವಾಣಿ ಸಂಖ್ಯೆ 104ಗೆ ಕರೆ ಮಾಡಬಹುದು.