ಮೈಸೂರಿನಲ್ಲಿ ವೃದ್ಧ ದಂಪತಿಯ ಬರ್ಬರ ಹತ್ಯೆ

ಮೈಸೂರಿನಲ್ಲಿ ವೃದ್ಧ ದಂಪತಿಯ ಬರ್ಬರ ಹತ್ಯೆ

HSA   ¦    May 14, 2019 02:12:36 PM (IST)
ಮೈಸೂರಿನಲ್ಲಿ ವೃದ್ಧ ದಂಪತಿಯ ಬರ್ಬರ ಹತ್ಯೆ

ಮೈಸೂರು: ಇಲ್ಲಿನ ನಾಗವಾಲದ ತೋಟದ ಮನೆಯಲ್ಲಿ ವಾಸವಾಗಿದ್ದ ಪತಿ ಹಾಗೂ ಪತ್ನಿಯನ್ನು ಸೋಮವಾರ ತಡರಾತ್ರಿ ಕೊಲೆ ಮಾಡಿದ್ದು, ಜೋಡಿ ಕೊಲೆಯು ಮೈಸೂರಿನಲ್ಲಿ ಭೀತಿ ಮೂಡಿಸಿದೆ.

ನಾಗವಾಲದ ಈರತ್ತಣ್ಣ(80) ಮತ್ತು ಪತ್ನಿ ಶಿವಮ್ಮ(75) ಎಂಬವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೈಸೂರು-ಹುಣಸೂರು ಮುಖ್ಯ ರಸ್ತೆ ಸಮೀಪವಿರುವ ತೋಟದ ಮನೆಯಲ್ಲಿ ಈ ಘಟನೆ ನಡೆದಿದೆ.

ವೃದ್ಧ ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಆದರೆ ಕೊಲೆಗೆ ಇದುವರೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇಲವಾಲ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.