ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ಸವಾರರಿಬ್ಬರು ಸಾವು

ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ಸವಾರರಿಬ್ಬರು ಸಾವು

LK   ¦    Apr 16, 2018 05:53:49 PM (IST)
ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ಸವಾರರಿಬ್ಬರು ಸಾವು

ರಾಮನಗರ: ರಸ್ತೆ ತಿರುವಿನಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ವಿಭೂತಿಕೆರೆ ಸಮೀಪ ನಡೆದಿದೆ.

ತಾಲೂಕಿನ ಕೈಲಾಂಚ ಹೋಬಳಿ ಬನ್ನಿಕುಪ್ಪೆ ಗ್ರಾಮದ ಸ್ವರೂಪ್ (18) ಮತ್ತು ತೇಜಸ್ (11) ಅಪಘಾತದಲ್ಲಿ ಮೃತಪಟ್ಟವರು.

ರಾಮನಗರದಿಂದ ಸ್ವಗ್ರಾಮ ಬನ್ನಿಕುಪ್ಪೆಗೆ ಬೈಕ್ನಲ್ಲಿ ಸ್ವರೂಪ್ ಮತ್ತು ತೇಜಸ್ ತೆರಳುತ್ತಿದ್ದರು. ಈ ವೇಳೆ ಬನ್ನಿಕುಪ್ಪೆಯಿಂದ ರಾಮನಗರದ ಕಡೆ ಹೊರಟಿದ್ದ ಟ್ರ್ಯಾಕ್ಟರ್ ವಿಭೂತಿಕೆರೆ ಗ್ರಾಮದ ತಿರುವಿನಲ್ಲಿ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರರ ಮೇಲೆ ಟ್ರ್ಯಾಕ್ಟರ್ ಚಕ್ರಗಳು ಹರಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಮನಗರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.