ಸಾಲಬಾಧೆಗೆ ಮತ್ತೊಬ್ಬ ರೈತ ಆತ್ಮಹತ್ಯೆ

ಸಾಲಬಾಧೆಗೆ ಮತ್ತೊಬ್ಬ ರೈತ ಆತ್ಮಹತ್ಯೆ

LK   ¦    Jun 23, 2019 12:00:53 PM (IST)
ಸಾಲಬಾಧೆಗೆ ಮತ್ತೊಬ್ಬ ರೈತ ಆತ್ಮಹತ್ಯೆ

ನಾಗಮಂಗಲ: ಸಾಲಬಾಧೆಯಿಂದ ಬೇಸತ್ತ ರೈತನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹೊಣಕೆರೆ ಹೋಬಳಿ ಹೆತ್ತಗೋನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹನುಮಂತಯ್ಯ (48) ಎಂಬಾತನೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ರೈತ.

ಈತ ನಾಗಮಂಗಲ ಎಸ್‍ಬಿಐ ಬ್ಯಾಂಕಿನಲ್ಲಿ ಆರು ಲಕ್ಷ ರೂ. ಸಾಲ ಮಾಡಿ ಟ್ರಾಕ್ಟರ್ ಖರೀದಿಸಿದ್ದ. ಅಲ್ಲದೆ ಖಾಸಗಿ ವ್ಯಕ್ತಿಗಳಿಂದ ಸುಮಾರು 6.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಪಡೆದ ಸಾಲಕ್ಕೆ ಬಡ್ಡಿ ಸೇರಿ ಒಟ್ಟು 21 ಲಕ್ಷ ರೂ. ಸಾಲ ಕಟ್ಟುವಂತೆ ಬ್ಯಾಂಕ್ ಅಧಿಕಾರಿಗಳು ನೋಟಿಸ್ ನೀಡಿದ್ದರು.

ಬ್ಯಾಂಕ್ ನೋಟಿಸ್ ನಿಂದ ಮನನೊಂದ ರೈತ ಹನುಮಂತಯ್ಯ ತನ್ನ ಜಮೀನಿನ ಬಳಿಯಿರುವ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ನಾಗಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.