ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ: ರಮಾನಾಥ ರೈ

ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ: ರಮಾನಾಥ ರೈ

LK   ¦    Aug 12, 2017 12:26:24 PM (IST)
ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ: ರಮಾನಾಥ ರೈ

ಮಡಿಕೇರಿ: ಕಾಡಾನೆ ಹಾವಳಿ ನಿಯಂತ್ರಣಕ್ಕೆ ಆನೆ ಕಂದಕ ನಿರ್ಮಾಣ ಹಾಗೂ ರೈಲು ಕಂಬಿ ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಬಿ.ರಮಾನಾಥ ರೈ ಅವರು ತಿಳಿಸಿದ್ದಾರೆ.ನಗರದ ಕೊಡಗು ಗೌಡ ಸಮಾಜದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2016-17ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಆನೆಗಳ ಸಂಖ್ಯೆ ಹೆಚ್ಚಿದ್ದು, ಕಾಡಾನೆ ಹಾವಳಿ ಶಾಶ್ವತವಾಗಿ ನಿಯಂತ್ರಿಸಲು ಸಕರ್ಾರ ಹಲವು ಕ್ರಮ ಕೈಗೊಂಡಿದೆ. ವನ್ಯಜೀವಿಗಳ ರಕ್ಷಣೆ ಮಾಡುವುದರ ಜೊತೆಗೆ ಆನೆ ಮತ್ತು ಮಾನವ ಸಂಘರ್ಷ ಕಡಿಮೆ ಮಾಡಲು ಆನೆ ಕಂದಕ, ಸೋಲಾರ್ ಬೇಲಿ ನಿರ್ಮಾಣ ಮಾಡಿಕೊಂಡು ಬರಲಾಗಿದೆ. ಅದನ್ನು ಇನ್ನಷ್ಟು ಆಧುನಿಕವಾಗಿ ಕಂದಕಗಳ ನಿರ್ಮಾಣ ಮಾಡುವುದರ ಜೊತೆಗೆ ರೈಲ್ವೆ ಕಂಬಿಗಳನ್ನು ಅಳವಡಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಅರಣ್ಯ ಸಚಿವರು ಹೇಳಿದರು.

ಕೊಡಗು ಜಿಲ್ಲೆಯಲ್ಲಿ 22 ಕಾಡಾನೆಗಳನ್ನು ಹಿಡಿದು ಸ್ಥಳಾಂತರ ಮಾಡಲಾಗಿದೆ. ಜಿಲ್ಲೆಯಲ್ಲಿ ಇನ್ನೂ ಉಪಟಳವಿರುವ ಕಾಡಾನೆಗಳನ್ನು ಸ್ಥಳಾಂತರ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಮಾನಾಥ ರೈ ಅವರು ಮಾಹಿತಿ ನೀಡಿದರು.ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಆನೆಗಳ ಸಂತತಿ ಹೆಚ್ಚಾಗಿದೆ. ಅದರಲ್ಲಿ ಕೊಡಗು ಮತ್ತು ಸಕಲೇಶಪುರ ಭಾಗದಲ್ಲಿ ಆನೆಗಳು ಹೆಚ್ಚಾಗಿವೆ. ಕಾಡಾನೆ ಹಾವಳಿ ನಿಯಂತ್ರಣ ಸಂಬಂಧಿಸಿದಂತೆ ಕೊಡಗು ಮತ್ತು ಬೆಂಗಳೂರಿನಲ್ಲಿ ಈಗಾಗಲೇ ಎರಡು-ಮೂರು ಬಾರಿ ಸಭೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಪರಿಸರ ಸೂಕ್ಷ್ಮ ವಲಯ ಪ್ರದೇಶ ಸಂಬಂಧಿಸಿದಂತೆ ರಾಜ್ಯ ಸಕರ್ಾರ 0 ಕಿ.ಮೀ.ಗೆ ನಿಗದಿಪಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು, ಆದರೆ ಕೇಂದ್ರ ಪರಿಸರ ಇಲಾಖೆ ಇದನ್ನು ಒಪ್ಪದೇ, ರಾಷ್ಟ್ರೀಯ ಉದ್ಯಾನವನ ಸುತ್ತಮುತ್ತಲ ಕನಿಷ್ಠ ಒಂದು ಕಿ.ಮೀ.ವರೆಗಾದರೂ ಪರಿಸರ ಸೂಕ್ಷ್ಮ ವಲಯವೆಂದು ಪರಿಗಣಿಸಬೇಕು ಎಂಬುದನ್ನು ಹೇಳುತ್ತಿದೆ ಎಂದು ರಮಾನಾಥ ರೈ ಅವರು ತಿಳಿಸಿದರು.
ಈ ಹಿಂದೆ ರಾಷ್ಟ್ರೀಯ ಉದ್ಯಾನವನ ಸುತ್ತಮುತ್ತ 10 ಕಿ,ಮೀ. ವ್ಯಾಪ್ತಿಗೆ ಪರಿಸರ ಸೂಕ್ಷ್ಮ ವಲಯ ಘೋಷಿಸಲಾಗಿತ್ತು, ಅಂತಹ ಪ್ರದೇಶದಲ್ಲಿ ಯಾವುದೇ ಚಟುವಟಿಕೆಯನ್ನು ಕೈಗೊಳ್ಳಬಾರದು ಎಂದು ಹೇಳಲಾಗಿತ್ತು ಎಂದು ಅವರು ಸ್ಮರಿಸಿದರು. ಸದ್ಯ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ಇದ್ದು, ಇದರಲ್ಲಿ ಕೆಲವು ಶಿಫಾರಸ್ಸುಗಳನ್ನು ಮಾಡಬಹುದಾಗಿದೆ ಎಂದು ಸಚಿವರು ವಿವರಿಸಿದರು.

ಇದೇ ಸಂದರ್ಭದಲ್ಲಿ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಧ್ಯಪ್ರವೇಶಿಸಿ ಮಾತನಾಡಿ ಅರಣ್ಯ ಪ್ರದೇಶದಲ್ಲಿ ತೇಗದ ಮರಗಳು ಸಾಕಷ್ಟು ಇವೆ. ಇದನ್ನು ಕಡಿದು ಬಿದಿರನ್ನು ಬೆಳೆಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಚಿವರಾದ ರಮಾನಾಥ ರೈ ಅವರು ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಯಾವುದೇ ಮರಗಿಡಗಳನ್ನು ಕಡಿಯುವಂತಿಲ್ಲ. ಮರ ಒಣಗಿ ಬಿದ್ದಿದ್ದರೂ ಸಹ ಅದನ್ನು ಮುಟ್ಟುವಂತಿಲ್ಲ. ಈ ಸಂಬಂಧ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅವರು ನುಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನೀಲಗಿರಿ ಮರಗಳನ್ನು ಕಡಿಯಲು ಅನುಮತಿ ನೀಡಲಾಗಿದೆ. ಅದೇ ರೀತಿ ತೇಗದ ಮರ ಕಡಿಯಲು ಅನುಮತಿ ನೀಡುವಂತೆ ಕೇಂದ್ರ ಸಕರ್ಾರವನ್ನು ಗಮನ ಸೆಲೆಯಲಾಗುವುದು ಎಂದು ಅವರು ಹೇಳಿದರು. ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಪದ್ಮಿನಿ ಪೊನ್ನಪ್ಪ, ಜಿಲ್ಲಾಧಿಕಾರಿ ಡಾ.ರಿಚಡರ್್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಇತರರು ಇದ್ದರು.