ಸ್ಪೀಕರ್ ಕಾಲಾವಕಾಶ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ಸ್ಪೀಕರ್ ಕಾಲಾವಕಾಶ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

YK   ¦    Jul 11, 2019 03:03:03 PM (IST)
ಸ್ಪೀಕರ್ ಕಾಲಾವಕಾಶ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾವಿಚಾರಣೆಗೆ ಕಾಲಾವಕಾಶ ಕೇಳಿ ಸ್ಪೀಕರ್ ರಮೇಶ್ ಕುಮಾರ್ ಅವರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಇಂದು ಸುಪ್ರೀ ಕೋರ್ಟ್ ಆದೇಶ ನೀಡಿದಂತೆ ಸಂಜೆ 6ರ ಳಗೆ ರಾಜೀನಾಮೆ ಅರ್ಜಿ ಇತ್ಯರ್ಥ ಸಾಧ್ಯವಿಲ್ಲ. ಮಧ್ಯರಾತ್ರಿ 12ರ ವರೆಗೆ ಕಾಲಾವಕಾಶ ಬೇಕು ಎಂದು ಸ್ಪೀಕರ್ ರಮೇಶ್ ಕುಮಾರ್ ಅವರು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಆದರೆ ಇದೀಗ ಸ್ಪೀಕರ್ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಅತೃಪ್ತ ಶಾಸಕರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠ ಸಂಜೆಯೊಳಗೆ ಖುದ್ದಾಗಿ ಸಭಾಧ್ಯಕ್ಷರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವಂತೆ ಮುಂಬೈನಲ್ಲಿರುವ ಅತೃಪ್ತ ಶಾಸಕರಿಗೆ ಸುಪ್ರೀಂ ಕೋರ್ಟ್ ಸೂಚನೆಯನ್ನು ನೀಡಿದೆ. ಸ್ಪೀಕರ್ ಭೇಟಿ ವೇಳೆ ಸೂಕ್ತ ಭದ್ರತೆ ಒದಗಿಸಲು ಸೂಚನೆಯನ್ನು ನೀಡಿದೆ.