ವಿದ್ಯುತ್ ಸ್ಪರ್ಶಿಸಿ ಇಬ್ಬರು ಸಾವು, ಓರ್ವನಿಗೆ ಗಂಭೀರ ಗಾಯ

ವಿದ್ಯುತ್ ಸ್ಪರ್ಶಿಸಿ ಇಬ್ಬರು ಸಾವು, ಓರ್ವನಿಗೆ ಗಂಭೀರ ಗಾಯ

YK   ¦    Feb 11, 2019 06:00:53 PM (IST)
ವಿದ್ಯುತ್ ಸ್ಪರ್ಶಿಸಿ ಇಬ್ಬರು ಸಾವು, ಓರ್ವನಿಗೆ ಗಂಭೀರ ಗಾಯ

ಚಿಕ್ಕಮಗಳೂರು: ವಿದ್ಯುತ್ ಆಘಾತಕ್ಕೆ ಒಳಗಾಗಿ ಇಬ್ಬರು ಸಾವನ್ನಪ್ಪಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಹರದಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಮೃತರನ್ನು ಶಿವಕುಮಾರ್(35) ಹಾಗೂ ಭರತ್(20). ಘಟನೆಯಲ್ಲಿ ಸಚಿನ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ.

ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.