ಸಾಮಾಜಿಕ ಜಾಲತಾಣದ ಸಮರ್ಪಕ ಬಳಕೆಗೆ ನಿತೀನ್ ಶೆಟ್ಟಿ ಸಲಹೆ

ಸಾಮಾಜಿಕ ಜಾಲತಾಣದ ಸಮರ್ಪಕ ಬಳಕೆಗೆ ನಿತೀನ್ ಶೆಟ್ಟಿ ಸಲಹೆ

CI   ¦    Oct 12, 2017 05:02:19 PM (IST)
ಸಾಮಾಜಿಕ ಜಾಲತಾಣದ ಸಮರ್ಪಕ ಬಳಕೆಗೆ ನಿತೀನ್ ಶೆಟ್ಟಿ ಸಲಹೆ

ಮಡಿಕೇರಿ: ಉತ್ತರ ಪ್ರದೇಶ ವಿಧಾನಸಭಾ ಚುಣಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲು ಸಾಮಾಜಿಕ ಜಾಲತಾಣದ ಸಮರ್ಪಕ ಬಳಕೆಯೇ ಕಾರಣವಾಗಿದ್ದು, ಕರ್ನಾಟಕದಲ್ಲೂ ಈ ತಂತ್ರವನ್ನು ಬಳಸಿಕೊಳ್ಳಬೇಕೆಂದು ಬಿಜೆಪಿ ಸಾಮಾಜಿಕ ಜಾಲತಾಣದ ವಿಭಾಗ ಪ್ರಬಾರಿ ನಿತೀನ್ ಶೆಟ್ಟಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ನಗರದ ಬಾಲಭಾವನದಲ್ಲಿ ನಡೆದ ಕೊಡಗು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು. ಸಾಮಾಜಿಕ ಜಾಲತಾಣಗಳ ಮೂಲಕ ಯುವ ಮತದಾರರನ್ನು ಸೆಳೆಯುವಂತೆ ಕರೆ ನೀಡಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ ಕೇಂದ್ರ ಸರಕಾರದ ಅಭಿವೃದ್ಧಿ ಯೋಜನೆಗಳ ಜೊತೆಗೆ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕೆಂದರು.

ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷರಾದ ಭಾರತೀಶ್ ಮಾತನಾಡಿ ಜನರನ್ನು ಜಾಗೃತಿಗೊಳಿಸಲು ಸಾಮಾಜಿಕ ಜಾಲತಾಣದ ಬಳಕೆ ಸಮರ್ಪಕವಾಗಿ ಆಗಬೇಕು. ಇದರಿಂದ ಮುಂಬರುವ ವಿಧಾನಸಭಾ ಚುಣಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಾಮಾಜಿಕ ಜಾಲತಾಣ ಪ್ರಕೋಷ್ಠಾದ ಜಿಲ್ಲಾ ಸಂಚಾಲಕರಾದ ಕಾಳಚಂಡ ಅಪ್ಪಣ್ಣ, ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸುತ್ತಿದ್ದು, ಉತ್ತಮ ಸ್ಪಂದನೆ ಸಿಕ್ಕಿದೆ ಎಂದರು.

ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಕಾಳನ ರವಿ, ನಗರಸಭಾ ಸದಸ್ಯರಾದ ಅನಿತಾ ಪೂವಯ್ಯ, ಸವಿತಾ ರಾಕೇಶ್, ಸಹಸಂಚಾಲಕರಾದ ಪೊನ್ನಪ್ಪ, ಯೋಗೇಶ್ ನಾಯ್ಡು, ವಿಜಯ್, ನವೀನ್, ರಜಿತ್, ದಿವಿನ್ ಹಾಗೂ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು. ಭಾರತೀ ರಮೇಶ್ ಪ್ರಾರ್ಥಿಸಿದರು, ಮೀನಾ ಪ್ರವೀಣ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.