ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು, ಒಬ್ಬ ಗಂಭೀರ

ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು, ಒಬ್ಬ ಗಂಭೀರ

SB   ¦    Oct 12, 2017 10:21:34 PM (IST)
ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು, ಒಬ್ಬ ಗಂಭೀರ

ಕಾರವಾರ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ದುಸಗಿ ಎನ್ನುವಲ್ಲಿ ಗುರುವಾರ ಸಂಭವಿಸಿದೆ.  

ಹಳಿಯಾಳದ ಅಳ್ನಾವರದ ಸಚಿನ್ ಕಲ್ಯಾಣಕರ್(18) ಹಾಗೂ ದಾಂಡೇಲಿ ನಿವಾಸಿ ಧೀರಜ್ ಗಿರಿ(19) ಸ್ಥಳದಲ್ಲೇ ಮೃತಪಟ್ಟ ಯುವಕರು. ಗಂಭೀರ ಗಾಯಗೊಂಡವನನ್ನು ಅಳ್ನಾವರದ ವಿನಾಯಕ ಎಂಬಾತನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ಸಾಗಿಸಲಾಗಿದೆ.

ಎರಡು ಬೈಕ್ ವೇಗವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲನೆ ಮಾಡುತ್ತಿದ್ದರು. ಅದೇ ವೇಗದಲ್ಲಿ ಬೈಕ್ ನಡುವೆ ಡಿಕ್ಕಿಯಾಗಿದ್ದರಿಂದ ಎರಡು ಬೈಕಿನ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಿಂದಾಗಿ ಕೆಲ ವೇಳೆ ಖಾನಾಪುರ-ತಾಳಗುಪ್ಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿತ್ತು. ಈ ಕುರಿತು ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.