ಕಾವೇರಿ ಶಾಂತಳಾಗುವಂತೆ ಪ್ರಾರ್ಥಿಸಿ ಪೂಜೆ

ಕಾವೇರಿ ಶಾಂತಳಾಗುವಂತೆ ಪ್ರಾರ್ಥಿಸಿ ಪೂಜೆ

LK   ¦    Jul 11, 2018 05:50:35 PM (IST)
ಕಾವೇರಿ ಶಾಂತಳಾಗುವಂತೆ ಪ್ರಾರ್ಥಿಸಿ ಪೂಜೆ

ಮಡಿಕೇರಿ: ಕಾವೇರಿ ಭೋರ್ಗರೆದು ಹರಿಯುತ್ತಿದ್ದು ರೌದ್ರತೆಯ ಕಾರಣದಿಂದ ಈಗಾಗಲೇ ಕಾವೇರಿ ನದಿ ತಟದ ವ್ಯಾಪ್ತಿಯಲ್ಲಿ ಕೋಟ್ಯಂತರ ರೂ. ನಷ್ಟ ಸಂಭವಿಸಿದೆ. ಇದೇ ರೀತಿ ಮುಂದುವರಿದರೆ ಕೊಡಗಿನಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗುವುದರೊಂದಿಗೆ ಭಾರೀ ಅನಾಹುತವಾಗುವ ಸಂಭವವಿರುವುದರಿಂದ ಕಾವೇರಿ ಶಾಂತವಾಗುವಂತೆ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ತೀರ್ಥಪೂಜೆಯನ್ನು ಮಾಡಲಾಗಿದೆ. ಈ ಸಂದರ್ಭ ಕಾವೇರಿ ಶಾಂತಳಾಗಿ ಜನಜಾನುವಾರುಗಳನ್ನು ರಕ್ಷಿಸುವಂತೆ ಪ್ರಾರ್ಥಿಸಲಾಗಿದೆ.

ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಸರಾಸರಿ 87.30 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ 110.66 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ 58.40 ಮಿ.ಮೀ, ಸೋಮವಾರಪೇಟೆ ತಾಲೂಕಿನಲ್ಲಿ 92.85 ಮಿ.ಮೀ. ಮಳೆಯಾಗಿದೆ.

ಇನ್ನು ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದ ಮಳೆಯ ಪ್ರಮಾಣವನ್ನು ಗಮನಿಸಿದೆ 1855.98ರಷ್ಟು ದಾಖಲೆಯ ಮಳೆಯಾಗಿರುವುದನ್ನು ಕಾಣಬಹುದಾಗಿದೆ. ಕಳೆದ ವರ್ಷ ಇದೇ ವೇಳೆಯಲ್ಲಿ ಕೇವಲ 821.09 ಮಿ.ಮೀ.ನಷ್ಟು ಮಳೆಯಾಗಿತ್ತು. ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶಾಂತಳ್ಳಿಯಲ್ಲಿ ಅತಿಹೆಚ್ಚು 185.20 ಮಿ.ಮೀ. ಹಾಗೂ ಕುಶಾಲನಗರದಲ್ಲಿ ಅತಿ ಕಡಿಮೆ 15.40ಮಿ.ಮೀ. ಮಳೆ ದಾಖಲಾಗಿದೆ.

More Images