ಕಾಸರಗೋಡು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ಎ.ಶ್ರೀನಿವಾಸ್ ಅಧಿಕಾರ ಸ್ವೀಕಾರ

ಕಾಸರಗೋಡು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ಎ.ಶ್ರೀನಿವಾಸ್ ಅಧಿಕಾರ ಸ್ವೀಕಾರ

SK   ¦    May 16, 2018 03:45:04 PM (IST)
ಕಾಸರಗೋಡು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ಎ.ಶ್ರೀನಿವಾಸ್ ಅಧಿಕಾರ ಸ್ವೀಕಾರ

ಕಾಸರಗೋಡು: ಕಾಸರಗೋಡು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ಎ. ಶ್ರೀನಿವಾಸ್ ಅವರು ಇಂದು ಅಧಿಕಾರ ಸ್ವೀಕರಿಸಿದರು.

ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಕೆ. ಜಿ ಸಿಮೋನ್ ರಿಂದ ಅಧಿಕಾರ ಸ್ವೀಕರಿಸಿದರು.

ಶಿವಮೊಗ್ಗ ಮೂಲದ ಡಾ. ಶ್ರೀನಿವಾಸ್ ಅವರು ಎರಡನೇ ಬಾರಿ ಕಾಸರಗೋಡಿನಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಯುಕ್ತಿಗೊಂಡಿದ್ದಾರೆ. 2015ರ ಫೆಬ್ರವರಿ 24ರಿಂದ 2016ರ ಜೂನ್ 14ರ ತನಕ ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ಬಳಿಕ ಕಣ್ಣೂರು ಕ್ರೈಮ್ ಬ್ರಾಂಚ್ ಮುಖ್ಯಸ್ಥರನ್ನಾಗಿ ನೇಮಿಸಲಾಗಿತ್ತು. ಇದೀಗ ಮತ್ತೆ ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

More Images