ಕೊಡಗಿನಲ್ಲಿ ಮುಂದುವರಿದ ವರುಣನ ಅಬ್ಬರ: ರಸ್ತೆಗುರುಳಿದ ಮರಗಳು

ಕೊಡಗಿನಲ್ಲಿ ಮುಂದುವರಿದ ವರುಣನ ಅಬ್ಬರ: ರಸ್ತೆಗುರುಳಿದ ಮರಗಳು

CI   ¦    Jul 11, 2018 07:46:55 PM (IST)
ಕೊಡಗಿನಲ್ಲಿ ಮುಂದುವರಿದ ವರುಣನ ಅಬ್ಬರ: ರಸ್ತೆಗುರುಳಿದ ಮರಗಳು

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ನಾಡಿನ ಜೀವನದಿ ಕಾವೇರಿ ಉಗಮ ಸ್ಥಳ ತಲಕಾವೇರಿ, ತ್ರಿವೇಣಿ ಸಂಗಮ ಭಾಗಮಂಡಲ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಕಳೆದ ಐದು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ.

ಭಾಗಮಂಡಲ ತ್ರಿವೇಣಿ ಸಂಗಮ ಉಕ್ಕಿ ಹರಿಯುತ್ತಿದ್ದು, ಭಾಗಮಂಡಲ-ಅಯ್ಯಂಗೇರಿ ವಾಹನ ಸಂಚಾರ ಕಡಿತಗೊಂಡಿದೆ. ಬೋಟ್ ಬಳಸಿ ಅಲ್ಲಿನ ನಾಗರಿಕರಿಗೆ ಸಂಪರ್ಕ ಕಲ್ಪಿಸಲಾಗುತ್ತಿದೆ. ಮಡಿಕೇರಿ-ಭಾಗಮಂಡಲ ಮಾರ್ಗದ ರಸ್ತೆಯಲ್ಲಿ ನೀರು ಹೆಚ್ಳಳವಾಗಿದೆ. ಭಾಗಮಂಡಲದಲ್ಲಿ ನುರಿತ ಈಜು ತಜ್ಞರು, ಗೃಹ ರಕ್ಷಕದಳದ ಸಿಬ್ಬಂದಿ ಮೊಕ್ಕಂ ಹೂಡಿದ್ದು, ಪ್ರವಾಹ ಹೆಚ್ಚಾದ ಸಂದರ್ಭದಲ್ಲಿ ಬೋಟ್ ಬಳಸಿ ಅಲ್ಲಿನ ಜನರು ಹಾಗೂ ಪ್ರವಾಸಿಗರಿಗೆ ಸಂಚಾರಕ್ಕೆ ಅನುವು ಮಾಡಿಕೊಡಲು ಅಗತ್ಯ ಸಿದ್ಧತೆ ಮಾಡಿಕೊಂಡಿದೆ.

ಕೊಡಗಿನ ದಕ್ಷಿಣ ಭಾಗದಲ್ಲಿ ಬಿರುಸಿನ ಮಳೆಯಾಗುತ್ತಿದ್ದು, ಲಕ್ಷ್ಮಣ ತೀರ್ಥ ನದಿ ತುಂಬಿ ಹರಿಯುತ್ತಿದೆ. ವ್ಯಾಪಕ ಮಳೆಯಿಂದಾಗಿ ತಿತಿಮತಿ ರಸ್ತೆಯು ಹದಗೆಟ್ಟಿದ್ದು, ಸರಿಪಡಿಸಿ ಸಂಚಾರಕ್ಕೆ ಅವಕಾಶ ಮಾಡಲಾಗಿದೆ. ಹಾಗೆಯೇ ಪೆರುಂಬಾಡಿ-ಮಾಕುಟ್ಟ ರಸ್ತೆ ಮಾರ್ಗದಲ್ಲಿ ಲಘು ವಾಹನಗಳು ಸಂಚರಿಸುತ್ತಿವೆ. ಹೀಗೆ ಜಿಲ್ಲೆಯಾದ್ಯಂತ ನಿರಂತರ ಸುರಿಯುತ್ತಿರುವುದರಿಂದ ಮಳೆಗೆ ಜನರ ಬದುಕು ದುಸ್ತರವಾಗಿದೆ. ಸಂಚಾರ ಹಾಗೂ ಜನಜೀವನ ಪರಿಸ್ಥಿತಿ ಅಸ್ತವ್ಯಸ್ಥ ಉಂಟಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಸುಗಮ ಸಂಚಾರ ಹಾಗೂ ಜನಜೀವನಕ್ಕೆ ಅಗತ್ಯ ಕ್ರಮಕೈಗೊಂಡಿದೆ.

ಪ್ರವಾಹ ಪೀಡಿತ ಪ್ರದೇಶವಾಗಿರುವ ಭಾಗಮಂಡಲದ ತ್ರಿವೇಣಿ ಸಂಗಮ ತುಂಬಿಹರಿಯುತ್ತಿದ್ದು, ಇಲ್ಲಿನ ನಿವಾಸಿ ವಸಂತ್ ಪ್ರತಿ ವರ್ಷ ಮಳೆಗಾಲದ ಅವಧಿಯಲ್ಲಿ ಭಾಗಮಂಡಲದಲ್ಲಿ ಪ್ರವಾಹ ಉಂಟಾಗುತ್ತಿದ್ದು, ಇದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ನಾಗರಿಕರು, ಪ್ರವಾಸಿಗರು ಸೇರಿದಂತೆ ಎಲ್ಲರಿಗೂ ತೊಂದರೆಯಾಗಿದೆ. ಆದ್ದರಿಂದ ಈಗಾಗಲೇ ಸರ್ಕಾರದ ಪ್ರಸ್ತಾವನೆಯಲ್ಲಿರುವಂತೆ ಆದಷ್ಟು ಶೀಘ್ರದಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿದರು.

ಮತ್ತೊಬ್ಬ ಸ್ಥಳೀಯರಾದ ನಿಷಾ ಅವರು ಮಾತನಾಡಿ ಭಾಗಮಂಡಲದಲ್ಲಿ ಪ್ರವಾಹ ಉಂಟಾಗುವುದರಿಂದ, ಇಲ್ಲಿನ ಜನರ ಪರಿಸ್ಥಿತಿ ಹೇಳತೀರದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಮುಳುಗು ತಜ್ಞರಾದ ರವಿಮುತ್ತಪ್ಪ ಅವರು ಭಾಗಮಂಡಲ-ಅಯ್ಯಂಗೇರಿ ರಸ್ತೆ ಮಾರ್ಗದಲ್ಲಿ ಬೋಟ್ ಬಳಸಲಾಗುತ್ತಿದೆ. ಮಡಿಕೇರಿ-ಭಾಗಮಂಡಲ ಮಾರ್ಗದಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲಿ ಬೋಟು ವ್ಯವಸ್ಥೆ ಮಾಡಲಾಗಿದ್ದು, ಈಗಾಗಲೇ ಸಂಬಂಧಪಟ್ಟ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ನಿವಾರಸಂತೆಯಲ್ಲೂ ಮಳೆ ತೀವ್ರ: ಶನಿವಾರಸಂತೆ ಕೊಡ್ಲಿಪೇಟೆ ಸೇರಿದಂತೆ ಸುತ್ತಮುತ್ತ ಭಾರೀ ಮಳೆ ಗಾಳಿಯಾಗುತ್ತಿದ್ದು ಕೆಲವೆಡೆ ರಸ್ತೆಗೆ ಅಡ್ಡಲಾಗಿ ಮರಗಳು ಹಾಗೂ ವಿದ್ಯೂತ್ ಕಂಬಗಳು ನೆಲಕ್ಕುರುಳಿದೆ ಇದರಿಂದ ಅನೆಕ ಗ್ರಾಮಗಳು ಕಳೆದ ಮೂರು ದಿನಗಳಿಂದ ಕತ್ತಲೆಯಲ್ಲಿ ದಿನತಳ್ಳುತ್ತಿದೆ.
ಕೊಡ್ಲಿಪೇಟೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ವಾಹನ ಸವಾರರು ತೊಂದರೆ ಅನುಭವಿಸಿದರು.

ಬ್ಯಾಡಗೊಟ್ಟ ಗ್ರಾಮಪಂಚಾಯ್ತಿಗೆ ಒಳಪಡುವ ಬೆಂಬಳೂರು ಗ್ರಾಮದಲ್ಲಿ ರಸ್ತೆಗೆ ಸರಿಯಾದ ಒಳಚರಂಡಿ ವ್ಯವಸ್ತೆ ಇಲ್ಲದೆ ಇರುವುದರಿಂದ ಇಲ್ಲಿಯ ಅನೇಕ ಕೂಲಿ ಕಾರ್ಮಿಕರ ಮನೆಗಳಿಗೆ ರಸ್ತೆಯ ನೀರೆಲ್ಲ ಒಳ ನುಗ್ಗಿದೆ ಇದರಿಂದ ತಿರ್ವ ತೊಂದರೆ ಅನುಭವಿಸುತ್ತಿದ್ಧಾರೆ ರಾತ್ರಿ ಪೂರ್ತಿ ಮನೆಯೊಳಗೆ ಮಲಗದೆ ಕಾಲ ಕಳೆಯವಂತಾಗಿದೆ.

ಅದೆ ರೀತಿಯಲ್ಲಿ ಮುಳ್ಳೂರು ಇಂಟಿನಾಯಕನ ಕೆರೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಕಡಿಮೇಪ್ರಮಾಣಾದಲ್ಲಿ ತುಂಬಿದ್ದ ಕೆರೆ ಇಂದು ಸಂಪೂರ್ಣ ಬರ್ತಿಯಾಗಿದ್ದು ಇಲ್ಲಿಯ ರೈತರು . ಈ ಕೆರೆಯನ್ನೆ ಇಲ್ಲಿಯ ರೈತರು ಅವಲಂಬಿಸಿದ್ದರು ಈ ಕೆರೆಯನ್ನು ನೋಡಿ ರೈತರು ಪ್ರತಿ ನಿತ್ಯ ನೋಡಿ ನಿರಾಸದಾಯಕತೆ ತೋರುತ್ತಿದ್ದರ ಅದರೆ ಕಳೆದ ಒಂದು ವಾರದಿಂದ ಬರುತ್ತಿರುವ ಮಳೆಯನ್ನು ನೋಡಿ ರೈತರ ಮೊಗದಲ್ಲಿ ಇದೀಗಹರ್ಷ ಮೂಡಿದೆ.

ಆಲೂರುಸಿದ್ಧಾಪುರ ಪಂಚಾಯ್ತಿಗೆ ಒಳಪಡುವ ಕಣಿವೆ ಬಸವನಹಳ್ಳಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಗ್ರಾಮೀಣ ಭಾಗದ ರಸ್ತೆಗಳಲಲಿ ಒಳ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದರಿಂದ ರಸ್ತೆಯೆಲ್ಲ ಕೆರೆಗಳಾಂತಾಗಿದೆ.
ಶನಿವಾರಸಂತೆ ಕುಶಾಲನಗರ ಮುಖ್ಯ ರಸ್ತೆಯ ಆಲೂರುಸಿದ್ಧಾಪೂರ ಸೇರಿದಂತೆ ಅಲ್ಲಲ್ಲಿ ರಸ್ತೆಯ ಒಳ ಚರಂಡಿಗಳು ಮುಚ್ಚಿರುವುದರಿಂದ ಮುಖ್ಯ ರಸ್ತೆಯಲ್ಲೆ ಮಳೆ ನೀರೆಲ್ಲ ಹರಿಯುತ್ತಿದೆ. ಇದರಿಂದ ಗುಂಡಿ ಇರುವ ರಸ್ತೆಗಳು ಕೆರೆಯಂತಾಗಿದೆ.
ಆಟೋದ ಮೇಲೆ ಮರ: ಸೋಮವಾರಪೇಟೆಯ ಐಬಿ ಬಳಿ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಮರ ಉರುಳಿ ಬಿದ್ದಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಡಿಕೇರಿ ಮಾರ್ಗದ ಹಟ್ಟಿಹೊಳೆ ಬಳಿಯೂ ಮರ ಬಿದ್ದಿದೆ. ಹಾಲೇರಿ ರಸ್ತೆಯಲ್ಲಿ ಬಿದ್ದ ಬೃಹತ್ ನಂದಿ ಮರವನ್ನು ಸ್ಥಳೀಯ ಯುವಕರು ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಟ್ಟರು.

ಕೊಡಗಿನ ಮಳೆ ವಿವರ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 87.30 ಮಿ.ಮೀ. ಕಳೆದ ವರ್ಷ ಇದೇ ದಿನ 5.44 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 1855.98 ಕಳೆದ ವರ್ಷ ಇದೇ ಅವಧಿಯಲ್ಲಿ 821.09 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 110.66 ಮಿ.ಮೀ. ಕಳೆದ ವರ್ಷ ಇದೇ ದಿನ 9.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2449.21 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1123.65 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 58.40 ಮಿ.ಮೀ. ಕಳೆದ ವರ್ಷ ಇದೇ ದಿನ 4.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1544.17 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 720.45 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 92.85 ಮಿ.ಮೀ. ಕಳೆದ ವರ್ಷ ಇದೇ ದಿನ 1.87 ಜನವರಿಯಿಂದ ಇಲ್ಲಿಯವರೆಗಿನ ಮಳೆ 1312.67 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 602.85 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 99.80, ನಾಪೋಕ್ಲು 101.20, ಸಂಪಾಜೆ 66.60, ಭಾಗಮಂಡಲ 175.04, ವಿರಾಜಪೇಟೆ ಕಸಬಾ 60.80, ಹುದಿಕೇರಿ 97, ಶ್ರೀಮಂಗಲ 109.40, ಪೊನ್ನಂಪೇಟೆ 26.20, ಅಮ್ಮತಿ 36, ಬಾಳೆಲೆ 21, ಸೋಮವಾರಪೇಟೆ ಕಸಬಾ 102.80, ಶನಿವಾರಸಂತೆ 123, ಶಾಂತಳ್ಳಿ 185.20, ಕೊಡ್ಲಿಪೇಟೆ 69.40, ಕುಶಾಲನಗರ 15.40, ಸುಂಟಿಕೊಪ್ಪ 61.30 ಮಿ.ಮೀ. ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ:

ಕಳೆದ ವರ್ಷ ಇದೇ ದಿನ 2833.48 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 23.60 ಮಿ.ಮೀ. ಇಂದಿನ ನೀರಿನ ಒಳಹರಿವು 14973 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 325 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 11938 ಕ್ಯುಸೆಕ್. ನಾಲೆಗೆ 450 ಕ್ಯುಸೆಕ್.

More Images