ಖಾಲಿ ಇರುವ ಹುದ್ದೆ ಭರ್ತಿಗೆ ಆಗ್ರಹಿಸಿ ಧರಣೆ

ಖಾಲಿ ಇರುವ ಹುದ್ದೆ ಭರ್ತಿಗೆ ಆಗ್ರಹಿಸಿ ಧರಣೆ

Nov 14, 2017 06:01:21 PM (IST)
ಖಾಲಿ ಇರುವ ಹುದ್ದೆ ಭರ್ತಿಗೆ ಆಗ್ರಹಿಸಿ ಧರಣೆ

ಕಾಸರಗೋಡು: ಕುಂಬಳೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಖಾಲಿಯಿರುವ ನೌಕರರ ಹುದ್ದೆಗೆ ನೇಮಕಾತಿ ನಡೆಸಬೇಕೆಂದು ಒತ್ತಾಯಿಸಿ ಜನಪ್ರತಿನಿಧಿಗಳು ಜಿಲ್ಲಾ ಪಂಚಾಯತ್ ನಿರ್ದೇಶಕರ ಕಚೇರಿ ಮುಂಭಾಗದಲ್ಲಿ ಮಂಗಳವಾರ ಧರಣಿ ನಡೆಸಿದರು.

ಕುಂಬಳೆ ಗ್ರಾಮ ಪಂಚಾಯತ್ ಅಧ್ಯಕ್ಷ ಪುಂಡರೀಕಾಕ್ಷ, ಉಪಾಧ್ಯಕ್ಷೆ ಗೀತಾ ಶೆಟ್ಟಿ ನೇತೃತ್ವದಲ್ಲಿ ನಡೆದ ಸತ್ಯಾಗ್ರಹದಲ್ಲಿ ಆಡಳಿತ ಹಾಗೂ ವಿಪಕ್ಷಗಳ ಜನಪ್ರತಿನಿಧಿಗಳು ಭಾಗವಹಿಸಿದ್ದರು. ಕುಂಬಳೆ ಪಂಚಾಯತ್ನಲ್ಲಿ ಕಾರ್ಯದರ್ಶಿ ಹಾಗೂ ನೌಕರರ ಹುದ್ದೆ ಖಾಲಿ ಇದ್ದು ಅವುಗಳಿಗೆ ಶೀಘ್ರ ನೇಮಕಾತಿ ನಡೆಸಬೇಕು. ನೌಕರರ ಕೊರತೆಯಿಂದ ಪಂಚಾಯತ್ ನಲ್ಲಿ ಎಲ್ಲಾ ಕೆಲಸ ಕಾರ್ಯಗಳು ಸ್ಥಗಿತಗೊಂಡಿದೆ. ಜನಸಾಮಾನ್ಯರಿಗೆ ತಲುಪಿಸಬೇಕಾದ ಸವಲತ್ತುಗಳು ನೀಡಲಾಗುತ್ತಿಲ್ಲ . ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರತಿಭಟಿಸಿ ಧರಣಿ ನಡೆಸಿದರು.

ಕಾರ್ಯದರ್ಶಿ ಮತ್ತು ನೌಕರರನ್ನು ನೇಮಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮುನ್ನೆಚ್ಚರಿಕೆ ನೀಡಿದರು.

More Images