ಹಸುಗೂಸು ಮಕ್ಕಳ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಹಸುಗೂಸು ಮಕ್ಕಳ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

LK   ¦    Sep 12, 2019 06:58:32 PM (IST)
ಹಸುಗೂಸು ಮಕ್ಕಳ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ನಾಗಮಂಗಲ: ತಾಲೂಕಿನ ಬೆಳ್ಳೂರ್ ಠಾಣೆ ವ್ಯಾಪ್ತಿಯ ಗ್ರಾಮದ 3 ವರ್ಷದ ಮಗು ಹಾಗೂ ಬಿಂಡಿಗನವಿಲೆ ಪೊಲೀಸ್ ಠಾಣೆ ವ್ಯಾಪ್ತಿಯ ಇನ್ನೊಂದು ಗ್ರಾಮದ 5 ವರ್ಷದ ಕಂದಮ್ಮಗಳ ಮೇಲೆ ಅತ್ಯಾಚಾರ ನಡೆದಿರುವುದು  ಮತ್ತು ಅವರ ಕುಟುಂಬಕ್ಕೆ ಸಹಾಯ ದೊರೆಯದಿರುವುದನ್ನು ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಟಿಬಿ ಬಡಾವಣೆ ಸರ್ಕಲ್ ನಿಂದ ನಾಗಮಂಗಲ ತಾಲೂಕು ಕಚೇರಿ ಆವರಣದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಆರೋಪಿ ವಿರುದ್ಧ ಹಾಗೂ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಶೋಭಾ ಅವರು, ಮಕ್ಕಳ ಮೇಲಿನ ಅತ್ಯಾಚಾರದಲ್ಲಿ ತಾಲೂಕಾಡಳಿತ ಮತ್ತು ಜಿಲ್ಲಾಡಳಿತ ನ್ಯಾಯ ಒದಗಿಸುವಲ್ಲಿ ವಿಫಲವಾಗಿದ್ದಾರೆ. ಮಕ್ಕಳು ಮತ್ತು ಮಹಿಳೆಯರ ಬಗ್ಗೆ ಕಾಳಜಿ ಇಲ್ಲ ತಕ್ಷಣವೇ ಬಿಡುಗಡೆ ಹೊಂದಿರುವ ಆರೋಪಿಗಳನ್ನು ಬಂಧಿಸಬೇಕು ಮತ್ತು ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದರು.