ವಿಂಡೀಸ್ ವಿರುದ್ಧ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಸಾಧಿಸಿದ ಟೀಂ ಇಂಡಿಯಾ

ವಿಂಡೀಸ್ ವಿರುದ್ಧ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಸಾಧಿಸಿದ ಟೀಂ ಇಂಡಿಯಾ

HSA   ¦    Sep 03, 2019 09:07:39 AM (IST)
ವಿಂಡೀಸ್ ವಿರುದ್ಧ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಸಾಧಿಸಿದ ಟೀಂ ಇಂಡಿಯಾ

ಕಿಂಗ್ ಸ್ಟನ್: ಟೀಂ ಇಂಡಿಯಾವು ಎರಡನೇ ಟೆಸ್ಟ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 257 ರನ್ ಗಳ ಗೆಲುವು ದಾಖಲಿಸಿಕೊಂಡಿದ್ದು, ನಾಯಕ ವಿರಾಟ್ ಕೊಹ್ಲಿ ಮಾಜಿ ಕಪ್ತಾನ ಮಹೇಂದ್ರ ಸಿಂಗ್ ಧೋನಿ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಈ ಗೆಲುವಿನೊಂದಿಗೆ ಟೀಂ ಇಂಡಿಯಾ 2-0ಯಿಂದ ಸರಣಿಯನ್ನು ತನ್ನದಾಗಿಸಿಕೊಂಡಿದೆ ಮತ್ತು ವಿಶ್ವ ಟೆಸ್ಟ್ ರ‍್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದೆ.

ವೆಸ್ಟ್ ಇಂಡೀಸ್ ವಿರುದ್ಧ ಭಾರತ ಸತತ 8ನೇ ಗೆಲುವು ದಾಖಲಿಸಿಕೊಂಡಿದೆ. ಬೃಹತ್ ಗೆಲುವಿನ ಗುರಿಯನ್ನು ಬೆನ್ನಟ್ಟುತ್ತಿದ್ದ ವಿಂಡೀಸ್ ಕೇವಲ 210 ರನ್ ಗಳಿಗೆ ಆಲೌಟ್ ಆಯಿತು.

ಮೊಹಮ್ಮದ್ ಸಮಿ ಮತ್ತು ರವೀಂದ್ರ ಜಡೇಜಾ ತಲಾ ಮೂರು ವಿಕೆಟ್, ಇಶಾಂತ್ ಶರ್ಮಾ ಎರಡು ವಿಕೆಟ್ ಕಬಳಿಸಿ ವಿಂಡೀಸ್ ಗೆ ಆಘಾತವಿಕ್ಕಿದರು. ಎರಡನೇ ಇನ್ನಿಂಗ್ಸ್ ನಲ್ಲಿ ಶಾಮರ್ಹ ಬ್ರೂಕ್ಸ್ ಮಾತ್ರ 50 ರನ್ ಮಾಡಿ ವಿಂಡೀಸ್ ಪರ ಗರಿಷ್ಠ ರನ್ ಮಾಡಿದರು.